Advertisement

ಸೋನಿಯಾ ಆರೋಗ್ಯ ಸ್ಥಿರ, ಸದ್ಯದಲ್ಲೇ ಬಿಡುಗಡೆ

01:02 AM May 12, 2017 | Team Udayavani |

ಹೊಸದಿಲ್ಲಿ: ಅನಾರೋಗ್ಯ ಕಾರಣ ಇಲ್ಲಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸಾಕಷ್ಟು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಆಹಾರದಲ್ಲಿನ ವ್ಯತ್ಯಾಸದಿಂದ ಉಂಟಾದ ಅನಾರೋಗ್ಯದಿಂದಾಗಿ ಅವರು ರವಿವಾರ ಇಲ್ಲಿಯ ಶ್ರೀ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸೋನಿಯಾ ನಮ್ಮ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಈಗ ಸ್ಥಿರವಾಗಿದೆ. ಇನ್ನೆರಡು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next