Advertisement
ಸೋನಿಯಾ ಗಾಂಧಿ ಅವರು ಕಳೆದೊಂದು ವಾರದಿಂದ ಪಕ್ಷದ ನಾಯಕರುಗಳ ಜೊತೆ ಸತತ ಸಭೆಯಲ್ಲಿ ತೊಡಗಿದ್ದಾರೆ. ಬುಧವಾರ ಸಂಜೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಸೋಂಕು ತಾಗಿರುವುದು ಪತ್ತೆಯಾಗಿದ್ದು, ಸದ್ಯ ಐಸೋಲೇಟ್ ಆಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
Related Articles
Advertisement
ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ (ಜಾರಿ ನಿರ್ದೇಶನಾಲಯ) ಸಮನ್ಸ್ ನೀಡಿದೆ. ರಾಹುಲ್ ಗಾಂಧಿಯವರಿಗೆ ಜೂ. 2ರಂದು ಹೊಸದಿಲ್ಲಿಯ ಇ.ಡಿ. ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಸೋನಿಯಾ ಗಾಂಧಿ ಜೂ. 8ರಂದು ವಿಚಾರಣೆ ಎದುರಿಸಲಿದ್ದಾರೆ.
ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾರೆ. ಹೀಗಾಗಿ ಜೂ. 5ರ ಬಳಿಕ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ಇ.ಡಿ.ಗೆ ಮನವಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಅಭಿಷೇಕ್ ಮನುಸಿಂಘ್ವಿ ಮತ್ತು ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.