ನವದೆಹಲಿ: ಕಳೆದ ಮೂರು ತಿಂಗಳ ಅವಧಿಯೊಳಗೆ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ಪಕ್ಷದ ಹಿರಿಯ ಮುಖಂಡ ಜೈರಾಮ್ ರಮೇಶ್ ಶನಿವಾರ (ಆಗಸ್ಟ್ 13) ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ:ವಿದ್ಯಾರ್ಥಿಗಳ ಕೈಯಿಂದ ರಕ್ಷಾ ಬಂಧನ ತೆಗೆಸಿದ ಪ್ರಕರಣ : ಕ್ಷಮೆ ಬಳಿಕ ಸುಖಾಂತ್ಯ
“ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ 19 ಪಾಸಿಟಿವ್ ವರದಿ ಬಂದಿದ್ದು, ಸರ್ಕಾರದ ನಿಯಮದಂತೆ ಐಸೋಲೇಶನ್ ನಲ್ಲಿ ಇರಲಿದ್ದಾರೆ ಎಂದು ಜೈರಾಮ್ ರಮೇಶ್ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಇದಕ್ಕೂ ಮುನ್ನ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುವ ಮೊದಲು ಸೋನಿಯಾ ಗಾಂಧಿಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು.
ಸೋನಿಯಾ ಗಾಂಧಿ ಅವರಿಗೆ ಜ್ವರ ಹಾಗೂ ಕೆಲವೊಂದು ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ. ಜೂನ್ 8ರಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುವುದಕ್ಕೆ ವಿನಾಯ್ತಿ ನೀಡಬೇಕೆಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲಾ ಮನವಿ ಮಾಡಿಕೊಂಡಿದ್ದರು.