Advertisement
ಇಲ್ಲಿನ ಎಐಸಿಸಿ ಕಚೇರಿಯಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸಭೆ ನಡೆಯಿತು. ಐದು ರಾಜ್ಯಗಳಲ್ಲಿನ ಕಾಂಗ್ರೆಸ್ ಸೋಲು ಅತ್ಯಂತ ಕಳವಳಕಾರಿ ಎಂಬ ಬಗ್ಗೆಯೂ ನಾಯಕರು ಆತಂಕ ವ್ಯಕ್ತಪಡಿಸಿದರು.
ಸಭೆ ನಂತರ ಮಾತನಾಡಿದ ರಂದೀಪ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಸಂಘಟನೆ ಸಂಬಂಧ ಸಭೆಯಲ್ಲಿ ಸೇರಿದ್ದ ಎಲ್ಲರ ಮಾತುಗಳನ್ನೂ ಆಲಿಸಿದರು. ಜತೆಗೆ, ಸಂಘಟನಾತ್ಮಕವಾಗಿ ಬದಲಾವಣೆ ಮಾಡಲು ಒಪ್ಪಿಗೆ ನೀಡಿದರು ಎಂದರು.
Related Articles
Advertisement
ರಾಹುಲ್ ಬಗ್ಗೆಯೇ ಒಲವುಕಾಂಗ್ರೆಸ್ನ ಪ್ರತಿಯೊಬ್ಬ ನಾಯಕ ಕೂಡ ರಾಹುಲ್ ಗಾಂಧಿ ಅವರೇ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದ್ದಾರೆ ಎಂದು ರಣದೀಪ್ ಸುಜೇìವಾಲ ಹೇಳಿದರು. ಆದರೆ, ಇದನ್ನು ಈಗ ನಿರ್ಧಾರ ಮಾಡುವುದಿಲ್ಲ. ಸಂಘಟನಾತ್ಮಕ ಚುನಾವಣೆ ಮುಗಿದ ಮೇಲೆ ಇದು ನಿರ್ಧಾರವಾಗುತ್ತದೆ ಎಂದರು. ಸಭೆಗೂ ಮುನ್ನವೇ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರೇ ಎಐಸಿಸಿ ಅಧ್ಯಕ್ಷರಾಗಲಿ ಎಂದು ಆಗ್ರಹಿಸಿದರು. ಜಿ23ನ ಮೂವರು ಭಾಗಿ
ಕಾಂಗ್ರೆಸ್ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಜಿ23ನ ಗುಲಾಂ ನಬಿ ಆಜಾದ್, ಆನಂದ್ ಶರ್ಮ ಮತ್ತು ಮುಕುಲ್
ವಾಸ್ನಿಕ್ ಅವರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಉಳಿದಂತೆ ಸಭೆಯಲ್ಲಿ ಇದ್ದವರೆಲ್ಲೂ ಗಾಂಧಿ ಕುಟುಂಬದ ನಿಷ್ಠೆಯುಳ್ಳವರಾಗಿದ್ದರು. ಅಲ್ಲದೆ, ಅನಾರೋಗ್ಯ ಕಾರಣದಿಂದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಎ.ಕೆ.ಆ್ಯಂಟನಿ ಅವರು ಸಭೆಯಲ್ಲಿ ಭಾಗಿಯಾಗಿರಲಿಲ್ಲ.