Advertisement

ಸೋನಿಯಾ ಗಾಂಧಿ ಡಿಕೆಶಿ ಭೇಟಿ ಇಂದು?

10:49 PM Oct 20, 2019 | Lakshmi GovindaRaju |

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡುವ ಸಾಧ್ಯತೆಯಿದೆ. ಈಗಾಗಲೇ ಸೋನಿಯಾ ಗಾಂಧಿಯವರು ಡಿ.ಕೆ.ಶಿವಕುಮಾರ್‌ ಭೇಟಿ ಮಾಡುವ ಕುರಿತು ತಿಹಾರ್‌ ಜೈಲಿನ ಅಧಿಕಾರಿಗೆ ಪತ್ರ ಬರೆದಿದ್ದಾರೆ.

Advertisement

ಸೋಮವಾರ ಡಿ.ಕೆ.ಶಿವಕುಮಾರ್‌ ಸಹೋದರ ಡಿ.ಕೆ. ಸುರೇಶ್‌ ಅವರೊಂದಿಗೆ ಜೈಲಿಗೆ ತೆರಳಿ, ಡಿ.ಕೆ.ಶಿವಕುಮಾರ್‌ಗೆ ಪಕ್ಷದ ಬೆಂಬಲ ಇದೆ ಎನ್ನುವ ಸಂದೇಶವನ್ನು ರವಾನೆ ಮಾಡಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ಈ ಹಿಂದೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನೂ ಸೋನಿಯಾ ಗಾಂಧಿ ಜೈಲಿನಲ್ಲಿ ಭೇಟಿ ಮಾಡಿ, ಧೈರ್ಯ ತುಂಬಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next