ಹೊಸದಿಲ್ಲಿ: ನ್ಯಾಷಮಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಇಡಿ (ಜಾರಿ ನಿರ್ದೇಶನಾಲಯ) ದ ವಿಚಾರಣೆಗೆ ಹಾಜರಾಗುವುದಿಲ್ಲ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸೋನಿಯಾಗೆ ಸೂಚಿಸಿದೆ. ಆದರೆ ಅನಾರೋಗ್ಯದ ಕಾರಣದಿಂದ ಸೋನಿಯಾ ಹಾಜರಾಗುತ್ತಿಲ್ಲ ಎಂದು ವರದಿ ತಿಳಿಸಿದೆ.
ಯಂಗ್ ಇಂಡಿಯಾ ಪ್ರೈವೆಟ್ ಕಂಪನಿಯಲ್ಲೂ ಸೋನಿಯಾ ಶೇ 38 ರಷ್ಟು ಶೇರು ಹೊಂದಿದ್ದಾರೆ. ಪ್ರಕರಣದ ವಿಚಾರಣೆಗಾಗಿ ಈ ಹಿಂದೆ ಜೂನ್ 8 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿತ್ತು. ಆದರೆ ಕೋವಿಡ್ ಕಾರಣ ನೀಡಿ 23 ಜೂನ್ ಗೆ ವಿಚಾರಣೆಗೆ ಹಾಜರಾಗುವ ಬಗ್ಗೆ ತಿಳಿಸಲಾಗಿತ್ತು. ಆದರೆ ಮತ್ತೆ ಅನಾರೋಗ್ಯದ ಕಾರಣ ನೀಡುರುವ ಸೋನಿಯಾ ಗಾಂಧಿ ಇಂದು ಸಹ ವಿಚಾರಣೆಗೆ ಗೈರಾಗುತ್ತಿದ್ದಾರೆ.
ಇದನ್ನೂ ಓದಿ:ಕಂಪನಿ ವಸ್ತು ಖರೀದಿಸಿದ್ರೆ ಉಚಿತ ಪ್ರವಾಸದ ಆಫರ್: ಕೋರ್ಟ್ ಮೆಟ್ಟಿಲೇರಿದ ಮಹಿಳೆ
ಮುಂದಿನ ಹಲವು ವಾರ ವಿಚಾರಣೆಗೆ ಹಾಜರಾಗಲು ಸಾದ್ಯವಿಲ್ಲ ಎಂದು ಇಡಿಗೆ ಸೋನಿಯಾ ಗಾಂಧಿ ಪತ್ರ ಬರೆದಿದ್ದಾರೆ.
ಕೋವಿಡ್ ಪಾಸಿಟಿವ್ ಆದ ಕಾರಣ ಸೋನಿಯಾ ಗಾಂಧಿ ಜೂನ್ 2ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 12ರ ವರೆಗೆ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು ಸದ್ಯ ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸೋನಿಯಾ ಪುತ್ರ ರಾಹುಲ್ ಗಾಂಧಿ ಅವರನ್ನು ಹಲವು ದಿನ ವಿಚಾರಣೆ ನಡೆಸಿದ್ದಾರೆ.