ನವದೆಹಲಿ:ಕೋವಿಡ್ 19 ಮತ್ತು ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ವಿಚಾರಣೆಗೆ ಹಾಜರಾಗುವುದನ್ನು ಕೆಲವು ವಾರಗಳ ಕಾಲ ಮುಂದೂಡಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೊಮ್ಮೆ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಉಡುಪಿ: ಮೆಹಂದಿ ಸಂಭ್ರಮದಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದರಿಂದ, ಸೋನಿಯಾ ಗಾಂಧಿ ಅವರು ತಾನು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಕೆಲವು ವಾರಗಳ ಕಾಲ ವಿಚಾರಣೆಗೆ ಹಾಜರಾಗುವುದನ್ನು ಮುಂದೂಡಬೇಕೆಂದು ಪತ್ರ ಬರೆದಿರುವುದಾಗಿ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಸೋಮವಾರ ಡಿಸ್ ಚಾರ್ಜ್ ಆಗಿದ್ದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು.
ನ್ಯಾಷನಲ್ ಹೆರಾಲ್ಡ್ ನ ಹಣಕಾಸು ಅವ್ಯವಹಾರ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸತತ ದಿನಗಳ ಕಾಲ 50ಗಂಟೆಗಿಂತಲೂ ಹೆಚ್ಚು ಸಮಯ ವಿಚಾರಣೆಗೊಳಪಡಿಸಿತ್ತು.