Advertisement

ಅಂದು ಕೆಲವು ಸಂಘಟನೆ ಕ್ವಿಟ್ ಇಂಡಿಯಾ ಚಳವಳಿಯನ್ನು ವಿರೋಧಿಸಿದ್ದವು!

12:45 PM Aug 09, 2017 | Team Udayavani |

ನವದೆಹಲಿ:ಕೆಲವು ಸಂಘಟನೆಗಳು ಕ್ವಿಟ್ ಇಂಡಿಯಾ ಚಳವಳಿಯನ್ನು ವಿರೋಧಿಸಿದ್ದವು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಲೋಕಸಭೆಯ ಕಲಾಪದಲ್ಲಿ ಸಂಘಟನೆಯ ಹೆಸರು ಹೇಳದೆ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Advertisement

ಕ್ವಿಟ್ ಇಂಡಿಯಾ ಚಳವಳಿಗೆ 75 ವರ್ಷ ಪೂರೈಸಿದ ಹಿನ್ನೆಲೆ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಕ್ವಿಟ್ ಇಂಡಿಯಾ ಚಳವಳಿಯನ್ನು ಕೆಲವು(ಆರ್ ಎಸ್ ಎಸ್) ಸಂಘಟನೆಗಳು ವಿರೋಧಿಸಿದ್ದನ್ನು ನಾವು ಮರೆಯಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಅಂತಹ ಸಂಘಟನೆಗಳು ಯಾವುದೇ ಪಾತ್ರ ವಹಿಸಿಲ್ಲ ಎಂದು ಹೇಳಿದರು.

ಸೋನಿಯಾ ಅವರು ಈ ಸಂದರ್ಭದಲ್ಲಿ ವಿಡಿ(ವಿನಾಯಕ ದಾಮೋದರ್) ಸಾವರ್ಕರ್ ಅವರನ್ನು ಗುರಿಯಾಗಿರಿಸಿಕೊಂಡು ಕೂಡಾ ಈ ಮಾತನ್ನು ಹೇಳಿದ್ದರು. 1942ರಲ್ಲಿ ಗಾಂಧಿ ಚಾಲನೆ ನೀಡಿದ್ದ ಕ್ವಿಟ್ ಇಂಡಿಯಾ ಚಳವಳಿಯನ್ನು ಸಾರ್ವಕರ್ ವಿರೋಧಿಸಿದ್ದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು ಪ್ರಾಣ ತ್ಯಾಗ ಮಾಡಿದ್ದಾರೆ ಎಂಬುದನ್ನು ಸ್ಮರಿಸಿಕೊಂಡರು. ಹಾಗಾಗಿ ಕ್ವಿಟ್ ಇಂಡಿಯಾ ಚಳವಳಿಗೆ 75 ವರ್ಷ ಪೂರೈಸಿದ ನಿಟ್ಟಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ, ಗೌರವಿಸಬೇಕಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next