ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ನಾಯಕಿಯಾಗಿ ಮತ್‌ತೊಮ್ಮೆ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ಸಂಸತ್ ಭವನದಸೆಂಟ್ರಲ್ ಹಾನ್‌ನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಸಂಸದರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ನೂತನ 52 ಮಂದಿ ಕಾಂಗ್ರೆಸ್ ಸಂಸದರು, ರಾಜ್ಯಸಭಾ ಸದಸ್ಯರು ಭಾಗಿಯಾಗಿದ್ದರು.
ಸೋನಿಯಾ ಅವರು ಯುಪಿಎ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ.
ಸೋನಿಯಾ ಗಾಂಧಿ ಅವರು ರಾಯ್ ಬರೇಲಿ ಕ್ಷೇತ್ರದಿಂದ 1.67 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಸಂಸತ್ ಕಲಾಪದಲ್ಲಿ ಆಡಳಿತ ಪಕ್ಷದ ವಿರುದ್ಧ ಯಾವ ವಿಚಾರಗಳನ್ನು ಎತ್ತಬೇಕು ಎನ್ನುವ ಕುರಿತೂ ಚರ್ಚೆ ನಡೆಸಲಾಗಿದೆ. ಪ್ರಮುಖವಾಗಿ ಆರ್ಥಿಕ ಕುಂಠಿತ, ನಿರುದ್ಯೋಗಮತ್ತು ಇತರಕೆಲ ವಿಚಾರಗಳನ್ನು ಹೋರಾಟಕ್ಕೆ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ನಿರ್ಧರಿಸಿದೆ.