Advertisement
ಸೆಪ್ಟೆಂಬರ್ 30 ರಂದು ರಾಜ್ಯಕ್ಕೆ ಪ್ರವೇಶಿಸಲಿರುವ ಯಾತ್ರೆಯ ಜವಾಬ್ದಾರಿ ನೀಡುವ ಮೂಲಕ ಸಿದ್ಧತೆ ನಡೆಸಿರುವುದನ್ನು ಗಮನಿಸಿದ ಶಿವಕುಮಾರ್, ”ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಅವರು ದಿನಾಂಕಗಳನ್ನು ನೀಡುತ್ತಾರೆ… ನಾನು ಭವಿಷ್ಯದಲ್ಲಿ ದಿನಾಂಕಗಳನ್ನು ಪ್ರಕಟಿಸುತ್ತೇನೆ.” ಎಂದು ತಿಳಿಸಿದ್ದಾರೆ.
Related Articles
Advertisement
ಸೆ.30ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಲ್ಲಿ ಕರ್ನಾಟಕದ ಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದ ಶಿವಕುಮಾರ್, ಅಕ್ಟೋಬರ್ 2 ಗಾಂಧಿ ಜಯಂತಿಯಂದು ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಹೆಸರಾದ ನಂಜನಗೂಡು ತಾಲೂಕಿನ ಬದನವಾಳುವಿನಲ್ಲಿ ಮಹಾತ್ಮ ಗಾಂಧೀಜಿ ಅವರು ಸ್ಥಾಪಿಸಿದ ಖಾದಿ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧಿ ಜಯಂತಿ ಆಚರಿಸಲಿದ್ದಾರೆ ಎಂದು ತಿಳಿಸಿದರು.
ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆ ನಡೆಯಲಿದ್ದು, ರಾಹುಲ್ ಗಾಂಧಿ ಅವರು ಯುವಕರು, ಮಹಿಳೆಯರು, ವಿದ್ಯಾರ್ಥಿಗಳು, ಬುಡಕಟ್ಟು ಸಮುದಾಯ ಮತ್ತು ರೈತರೊಂದಿಗೆ ಪ್ರತಿದಿನ ಸಂವಾದ ನಡೆಸಲಿದ್ದು,ಇದಕ್ಕಾಗಿ ತಂಡಗಳನ್ನು ರಚಿಸಲಾಗಿದೆ ಎಂದರು.
ಎಐಸಿಸಿ ಅಧ್ಯಕ್ಷ ಹುದ್ದೆಯ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, “ರಾಹುಲ್ ಜಿ ಅವರು ಪಕ್ಷವನ್ನು ಮುನ್ನಡೆಸಬೇಕು ಎಂದು ನಾವೆಲ್ಲರೂ ಬದ್ಧರಾಗಿದ್ದೇವೆ, ಆದರೆ ಅದು ಅವರಿಗೆ ಬಿಟ್ಟಿದೆ” ಎಂದರು.
”ಯಾತ್ರೆಗೆ ಕೆಪಿಸಿಸಿ ಮಾಡಿರುವ ವ್ಯವಸ್ಥೆಗಳ ಬಗ್ಗೆ ಎಐಸಿಸಿ ಸಂಪೂರ್ಣ ತೃಪ್ತವಾಗಿದೆ ಎಂದ ವೇಣುಗೋಪಾಲ್, ಈ ಯಾತ್ರೆಯು ಇಲ್ಲಿಯವರೆಗೆ ಯಶಸ್ವಿಯಾಗಿದೆ ಮತ್ತು ತಮಿಳುನಾಡು ಮತ್ತು ಕೇರಳದಲ್ಲಿ ಅದಕ್ಕೆ ಪ್ರತಿಕ್ರಿಯೆ ಊಹಿಸಲಾಗದ ಮತ್ತು ನಿರೀಕ್ಷೆಗೂ ಮೀರಿದ್ದು ಎಂದು ಹೇಳಿದರು.