Advertisement

‘ವಸುಂಧರ ದೇವಿ’ಯಾದ ಸೋನು ಗೌಡ

02:01 PM Oct 20, 2022 | Team Udayavani |

ಸೋನು ಗೌಡ ಸದ್ದಿಲ್ಲದೇ ಹೊಸ ಸಿನಿಮಾವೊಂದರ ಚಿತ್ರೀಕರಣ ಮುಗಿಸಿದ್ದಾರೆ. ಅದು “ವಸುಂಧರ ದೇವಿ’. ಧರ್ಮ ಕೀರ್ತಿರಾಜ್‌ ಈ ಚಿತ್ರದ ನಾಯಕ. ಇತ್ತೀಚೆಗೆ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಮಹೇಶ್‌ ಚಿನ್ಮಯ್‌ ಈ ಚಿತ್ರದ ನಿರ್ದೇಶಕರು.

Advertisement

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮಹೇಶ್‌, “ಇದು ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಧರ್ಮ ಕೀರ್ತಿರಾಜ್‌ ಅವರೊಡನೆ ಇದು ಎರಡನೇ ಚಿತ್ರ. “ವಸುಂಧರ ದೇವಿ’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಮುಖ್ಯಮಂತ್ರಿಗಳ ಮಗಳೊಬ್ಬಳು ತಾನು ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಂದ ಮುಖ್ಯಮಂತ್ರಿ ಆಗುತ್ತಾಳೆ. ನಂತರ ಆಕೆಯ ಕೊಲೆಯಾಗುತ್ತದೆ. ಆ ಕೊಲೆ ಮಾಡಿದ್ದು ಯಾರು? ಎಂದು ಕಂಡು ಹಿಡಿಯಲು ತನಿಖಾಧಿಕಾರಿ ಬರುತ್ತಾರೆ. ಆ ಪಾತ್ರದಲ್ಲಿ ಧರ್ಮ ಕೀರ್ತಿರಾಜ್‌ ಅಭಿನಯಿಸಿದ್ದಾರೆ. “ವಸುಂಧರ ದೇವಿ’ ಪಾತ್ರದಲ್ಲಿ ಸೋನು ಗೌಡ ನಟಿಸಿದ್ದಾರೆ. ಗೋವಿಂದೇ ಗೌಡ, ರೂಪೇಶ್‌, ಪೂಜಾ, ಸೆವೆನ್‌ ರಾಜ್‌ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆಯಿದೆ’ ಎಂದು ವಿವರಿಸಿದರು.

ನಾಯಕ ಧರ್ಮಗೆ ಈ ಚಿತ್ರದ ಮೂಲಕ ಒಂದು ಬ್ರೇಕ್‌ ಸಿಗುವ ನಿರೀಕ್ಷೆ ಇದೆ. “ನಾನು ಈ ಹಿಂದೆ ನಟಿಸಿರುವ ಚಿತ್ರಗಳಿಗಿಂತ ಈ ಚಿತ್ರದ ಪಾತ್ರ ವಿಭಿನ್ನವಾಗಿದೆ. ನನ್ನ ಹೇರ್‌ ಸ್ಟೈಲ್‌ ಕೂಡಾ ಈ ಚಿತ್ರಕ್ಕಾಗಿ ಬದಲಿಸಿಕೊಂಡಿದ್ದೇನೆ. ಮಹೇಶ್‌ ಒಂದೊಳ್ಳೆಯ ಚಿತ್ರ ನಿರ್ದೇಶನ ಮಾಡಿದ್ದಾರೆ. ಅಶೋಕ್‌ ನಿರ್ಮಾಣ ಮಾಡಿದ್ದಾರೆ. ಸೋನು ಗೌಡ ಸೇರಿದಂತೆ ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ’ ಎಂದರು.

ನಿರ್ಮಾಪಕ ಅಶೋಕ್‌ ಕವೇಟಿ ಈ ಚಿತ್ರವನ್ನು ನಿರ್ಮಿಸುವ ಜೊತೆಗೆ ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿದ್ದಾರಂತೆ. ಚಿತ್ರಕ್ಕೆ ವಿನು ಮನಸು ಹಿನ್ನೆಲೆ ಸಂಗೀತ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next