Advertisement

300 ಕೃಷಿ ಅಧಿಕಾರಿಗಳ ಶೀಘ್ರ ನೇಮಕ: ಸಚಿವ ಸೋಮಶೇಖರ್‌

11:18 PM Dec 21, 2022 | Team Udayavani |

ಬೆಳಗಾವಿ: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 300 ಕೃಷಿ ಅಧಿಕಾರಿಗಳನ್ನು ಶೀಘ್ರ ನೇಮಿಸಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ವಿಧಾನಸಭೆಯಲ್ಲಿ ತಿಳಿಸಿದರು.

Advertisement

ಪ್ರಶ್ನೋತ್ತರ ವೇಳೆಯಲ್ಲಿ ಎಸ್‌.ಎನ್‌.ಸುಬ್ಟಾರೆಡ್ಡಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ ಇರುವುದು ನಿಜ. ಸದ್ಯ 300 ಕೃಷಿ ಅಧಿಕಾರಿಗಳ ನೇಮಕ ನಡೆಯುತ್ತಿದ್ದು, ಈ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಶೀಘ್ರ ಸೇವೆಗೆ ತೆಗೆದುಕೊಳ್ಳಲಾಗುವುದು ಎಂದರು.

ಇಡಬ್ಲ್ಯೂಎಸ್‌ ಮೀಸಲಾತಿಗೆ ಕ್ರಮ: ಕಾರಜೋಶ
ಬೆಳಗಾವಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಅಭ್ಯರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 40 ಮೀಸಲಾತಿ ಕಲ್ಪಿಸುವ ಸಂಬಂಧ ಸರಕಾರದ ಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರವಿ ಸುಬ್ರಹ್ಮಣ್ಯ ಪ್ರಶ್ನೆಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪರವಾಗಿ ಉತ್ತರಿಸಿದ ಅವರು, ಕೋವಿಡ್‌ ಕಾರಣದಿಂದ ಈ ಪ್ರಸ್ತಾವನೆ ಪರಿಶೀಲನೆಯಲ್ಲಿ ವಿಳಂಬವಾಗಿತ್ತು. ಬ್ರಾಹ್ಮಣ ಸಮುದಾಯದವರಿಗೆ ವರ್ಷಕ್ಕೊಮ್ಮೆ ಜಾತಿ ಮತ್ತು ಆದಾಯ ದೃಢೀಕರಣ ಪತ್ರ ನೀಡುವ ವ್ಯವಸ್ಥೆ ಬದಲಾಗಿ, ಬೇರೆ ಸಮುದಾಯಗಳಿಗೆ ನೀಡುವಂತೆ 5 ವರ್ಷಗಳ ಅವಧಿಗೆ ಈ ಪ್ರಮಾಣಪತ್ರಗಳನ್ನು ವಿತರಿಸಲು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next