Advertisement

ಶೀಘ್ರದಲ್ಲೇ “ಲಾ’ಟ್ರೈಲರ್:‌ ಪುನೀತ್​​ ರಾಜ್​​ಕುಮಾರ್

09:58 AM Jul 08, 2020 | Lakshmi GovindaRaj |

ಪವರ್​ ಸ್ಟಾರ್​ ಪುನೀತ್​​ ರಾಜ್​​ಕುಮಾರ್​​ ಅವರ ಪಿಆರ್​ಕೆ ಬ್ಯಾನರ್​ನಡಿ ನಿರ್ಮಾಣವಾಗಿರುವ “ಲಾʼ ಚಿತ್ರವು ಇದೇ ಜುಲೈ 17 ರಂದು ತೆರೆಗೆ ಬರಲು ಸಿದ್ಧವಾಗಿದ್ದು, ಪ್ರಜ್ವಲ್​ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್ ಮೊದಲ ಬಾರಿಗೆ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ಲಾಕ್‌ಡೌನ್‌ ಕಾರಣದಿಂದ ಚಿತ್ರವು ಚಿತ್ರಮಂದಿರದಲ್ಲಿ ಪ್ರದರ್ಶನವಾಗದೇ, ಒಟಿಟಿ ಫ್ಲಾರ್ಟ್​ಫಾರ್ಮ್​ ಅಮೆಜಾನ್​ ಪ್ರೈಮ್​ನಲ್ಲಿ ಬಿಡುಗಡೆಯಾಗುತ್ತಿದೆ.

Advertisement

ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಚಿತ್ರವು ಭಾರೀ ನಿರೀಕ್ಷೆಯನ್ನು ಹುಟ್ಟು ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇನ್ನು ಚಿತ್ರದ ಬಗ್ಗೆ ಪುನೀತ್​ ರಾಜ್​ಕುಮಾರ್​ ಮಾಹಿತಿಯೊಂದನ್ನು ನೀಡಿದ್ದು, ಚಿತ್ರದ ಟ್ರೇಲರನ್ನು ಸದ್ಯದಲ್ಲೇ ಬಿಡುಗಡೆ ಮಾಡಲಿದ್ದೇವೆ ಎಂದು ತಮ್ಮ ಸಾಮಾಜಿಕ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

“ಲಾ’ ಚಿತ್ರವು ಕ್ರೈಂ ಥ್ರಿಲ್ಲರ್‌ ಕಥೆಯನ್ನು ಹೊಂದಿದ್ದು, ಇಲ್ಲಿ ನ್ಯಾಯಕ್ಕಾಗಿ ಹೋರಾಡುವ ನಂದಿನಿ ಪಾತ್ರದಲ್ಲಿ ರಾಗಿಣಿ ಚಂದ್ರನ್ ಕಾಣಿಸಿಕೊಂಡಿದ್ದಾರೆ. ಆಸಕ್ತಿಕರ ನಿರೂಪಣೆ ಇರುವ ಈ ಚಿತ್ರಕ್ಕೆ ರಘು ಸಮರ್ಥ್ ನಿರ್ದೇಶನವಿದ್ದು, ಮುಖ್ಯಮಂತ್ರಿ ಚಂದ್ರು, ಅಚ್ಯುತ್‌ ಕುಮಾರ್‌, ಸುಧಾರಾಣಿ, ರಾಜೇಶ್‌ ನಟರಂಗ, ಮಂಡ್ಯ ರಮೇಶ್ ಸೇರಿದಂತೆ ಮುಂತಾದವರು ಅಭಿನಯಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next