Advertisement

ವಿಜಯನಗರ ಜಿಲ್ಲೆಯಲ್ಲಿ ಶೀಘ್ರ ನೂತನ ಮೆಡಿಕಲ್ ಕಾಲೇಜ್ : ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

04:25 PM Nov 02, 2023 | Team Udayavani |

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪೈಕಿ ಆರು ಭಾಗಗಳಲ್ಲಿ ಮೆಡಿಕಲ್ ಕಾಲೇಜ್‌ಗಳಿದ್ದು, ವಿಜಯನಗರ ಜಿಲ್ಲೆಯಲ್ಲಿ ನೂತನ ಮೆಡಿಕಲ್ ಕಾಲೇಜನ್ನು ಮುಂದಿನ ವರ್ಷದಿಂದ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು.

Advertisement

ನಗರದಲ್ಲಿ ವಿಮ್ಸ್ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಮ್ಸ್ ಆಸ್ಪತ್ರೆಗೆ ಸರಕಾರದಿಂದ ನಿಗದಿ ಪಡಿಸಿದ ಅನುದಾನವನ್ನು ಸಕಾಲಕ್ಕೆ ಬಿಡುಗಡೆ ಮಾಡಲಾಗುತ್ತಿದ್ದು, ಯಾವುದೇ ತಾರತಮ್ಯ ಮಾಡುತ್ತಿಲ್ಲ. ವಿಮ್ಸ್‌ಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು, ವ್ಯವಸ್ಥೆ ಸುಧಾರಣೆಗಾಗಿ ಕ್ರಮಕೈಗೊಳ್ಳಲಾಗುತ್ತಿದೆ. ಸಿಬ್ಬಂದಿ ನೇಮಕಕ್ಕೆ ಸಂಬಂಸಿದಂತೆ ಸರಕಾರದ ಮಟ್ಟದಲ್ಲಿ ಪರಿಶೀಲನೆ ಇದ್ದು, ಇನ್ನೊಂದು ವಾರದಲ್ಲಿ ನಿರ್ಣಾಯ ಕೈಗೊಳ್ಳಲಾಗುವುದು ಎಂದರು.

ಔಷಧ ಪೂರೈಕೆ: ವಿಮ್ಸ್‌ನಲ್ಲಿ ಎಲ್ಲ ಔಷಧ ಪೂರೈಕೆಯಾಗುತ್ತಿದ್ದು, ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳಿಗೆ ಔಷಧಗಳನ್ನು ಹೊರಗಡೆ ಬರೆದುಕೊಡದಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗುವುದು. ವಿಮ್ಸ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಕರ್ತವ್ಯದ ಸಮಯದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಪಡೆದು ಸೂಕ್ತ ಕ್ರಮಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿನ ಮೆಡಿಕಲ್ ಕಾಲೇಜ್‌ಗಳಿಗೆ ಸರಕಾರದಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗಿದೆ. ಮೆಡಿಕಲ್ ಕಾಲೇಜುಗಳಿಗೆ ಅನುದಾನ ಒದಗಿಸಲು ಸರಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ಆದರೆ, ನಿರ್ವಹಣೆ ಪ್ರಾಮಾಣಿಕವಾಗಿ ನಡೆಯಬೇಕಿದೆ ಎಂದರು.

ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಎಲ್ಲ ಶಾಸಕರು ಒಗ್ಗಟ್ಟಾಗಿದ್ದುಘಿ, ಯಾವುದೇ ಭಿನ್ನಮತವಿಲ್ಲ. ಇದೆಲ್ಲ ಬಿಜೆಪಿ ಸೃಷ್ಟಿಯಾಗಿದೆ. ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಲಾಗದೇ ಈ ರೀತಿಯ ಸುದ್ದಿಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿಂದೆ ಶಾಸಕರನ್ನು ಖರೀದಿಸಿ ಸರಕಾರ ರಚನೆ, ಭ್ರಷ್ಟಾಚಾರದಿಂದಾಗಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಜನ ತಿರಸ್ಕಾರ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ನೀಡುವ ಬಿಜೆಪಿ ದೇಶದಲ್ಲಿಯೇ ಅಸ್ತಿತ್ವಕಳೆದುಕೊಳ್ಳಲಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next