Advertisement

ಶೀಘ್ರವೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ: ನಾರಾಯಣಸ್ವಾಮಿ

11:36 PM Jul 13, 2019 | Team Udayavani |

ಶಿಡ್ಲಘಟ್ಟ: ರಾಜ್ಯದಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನೇತೃತ್ವದ ಸಮಿಶ್ರ ಸರ್ಕಾರ ಶೀಘ್ರವೇ ಪತನವಾಗಲಿದ್ದು, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ಭವಿಷ್ಯ ನುಡಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಮತ್ತೂಮ್ಮೆ ಸಿಎಂ ಆಗಲು ಪಿತೂರಿ ಮಾಡುತ್ತಿರುವ ಸಿದ್ದರಾಮಯ್ಯ ಅವರ ಧೋರಣೆಯಿಂದ ಬೇಸತ್ತು ಮೈತ್ರಿ ಪಕ್ಷಗಳ ಶಾಸಕರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ.

ಮೈತ್ರಿ ಪಕ್ಷಗಳ ಸಚಿವರು ಹಾಗೂ ಶಾಸಕರು ರಾಜೀನಾಮೆ ನೀಡಿರುವುದರಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ. ಅಧಿಕಾರ ಹಾಗೂ ಹಣದ ವಿಚಾರಕ್ಕೆ ಅವರೆಲ್ಲಾ ಬೀದಿಗೆ ಬಂದಿದ್ದಾರೆ. ಇದೆಲ್ಲವನ್ನೂ ಜನಸಾಮಾನ್ಯರು, ಮತದಾರರು ಗಮನಿಸುತ್ತಿದ್ದರೂ ಅದರ ಪರಿಜ್ಞಾನವೇ ಇಲ್ಲದೆ ಕಚ್ಚಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next