Advertisement
ನಿತ್ಯ 400 ಟನ್ ತ್ಯಾಜ್ಯ: ನಗರದ ಸ್ವತ್ಛತೆ ಕಾಪಾಡುವಲ್ಲಿ ನಗರ ಪಾಲಿಕೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರೂ, ನಗರದ ಹಲವು ಕಡೆಗಳಲ್ಲಿ ಇಂದಿಗೂ ಕಸದ ಸಮಸ್ಯೆ ಇದೆ. ಪ್ರಸ್ತುತ ಮೈಸೂರಿನಲ್ಲಿ ಪ್ರತಿದಿನ 400 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಕೇವಲ 200 ಟನ್ ತ್ಯಾಜ್ಯವನ್ನು ಮಾತ್ರ ಸಂಸ್ಕರಣೆ ಮಾಡಲಾಗುತ್ತಿದೆ. ಬಾಕಿ ಉಳಿಯುವ 200 ಟನ್ ತ್ಯಾಜ್ಯವನ್ನು ಸೂಯೇಜ್‌ಫಾರಂನಲ್ಲಿ ಸಂಗ್ರಹಿಸಲಾಗುತ್ತಿದೆ.
Related Articles
Advertisement
ಇವರುಗಳು ಮುಂದಿನ ದಿನಗಳಲ್ಲಿ ತಮ್ಮ ಉದ್ದಿಮೆಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ತಾವೇ ವಿಲೇವಾರಿ ಮಾಡಬೇಕಿದೆ. ಇವರು ನಿತ್ಯವೂ ಸಂಗ್ರಹವಾಗುವ ತ್ಯಾಜ್ಯವನ್ನು ಸಂಗ್ರಹಿಸಿ ತಮ್ಮದೇ ಸ್ಥಳದಲ್ಲಿ ಗೊಬ್ಬರ ಅಥವಾ ಗೋಬರ್ ಗ್ಯಾಸ್ ತಯಾರಿಕಾ ಘಟಕವನ್ನು ಅಳವಡಿಸಿಕೊಳ್ಳಬೇಕಿದೆ.
ಕಾನೂನು ಕ್ರಮ: ಪಾಲಿಕೆ ನಿರ್ಧಾರದಂತೆ ನಗರದಲ್ಲಿ ಹೊಸ ಕಾನೂನು ಜಾರಿಯಾದರೆ, ಕಾನೂನು ಅನುಷ್ಠಾನಗೊಂಡ ಬಳಿಕ ಪಾಲಿಕೆ ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವವರ ಬಳಿ ತೆರಳಿ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿ, ಇದಕ್ಕಾಗಿ ಇಂತಿಷ್ಟು ಕಾಲಾವಕಾಶ ನೀಡಲಾಗುತ್ತದೆ.
ಆದರೂ ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಕರು ಪಾಲಿಕೆ ಅಧಿಕಾರಿಗಳ ಮನವಿಗೆ ಪೂರಕವಾಗಿ ಸ್ಪಂದಿಸದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲು ಪಾಲಿಕೆ ನಿರ್ಧರಿಸಿದೆ. ಆದ್ದರಿಂದ ಇನ್ನು ಮುಂದೆ ದೊಡ್ಡ ಪ್ರಮಾಣದ ತ್ಯಾಜ್ಯ ಉತ್ಪಾದಕರು ತಾಜ್ಯ ವಿಲೇವಾರಿ ಜವಾಬ್ದಾರಿಯನ್ನು ಪಾಲಿಕೆ ಹೆಗಲಿಗೆ ಹಾಕಲು ಅವಕಾಶಗಳಿರುವುದಿಲ್ಲ.
ನಗರದಲ್ಲಿ ತ್ಯಾಜ್ಯ ನಿರ್ವಹಣೆಗಾಗಿ ಸಾಕಷ್ಟು ಸುಧಾರಣೆಗಳನ್ನು ತರಲಾಗುತ್ತಿದೆ. ಇದೀಗ ತ್ಯಾಜ್ಯ ನಿರ್ವಹಣೆಗೆ ಹೊಸ ಕಾನೂನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಶೀಘ್ರವೇ ಸಾರ್ವಜನಿಕರಿಗೆ ಮಾಹಿತಿ ನೀಡಿ, ಆಕ್ಷೇಪಣೆಗಳನ್ನು ಸ್ವೀಕರಿಸಿದ ನಂತರ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ಪಡೆದ ಬಳಿಕ, ಒಂದು ತಿಂಗಳಲ್ಲಿ ಹೊಸ ಕಾನೂನು ಜಾರಿಯಾಗಲಿದೆ. -ಡಾ.ನಾಗರಾಜ್, ನಗರ ಪಾಲಿಕೆ ಆರೋಗ್ಯಾಧಿಕಾರಿ. * ಸಿ. ದಿನೇಶ್