Advertisement

ಗಣ್ಯರಿಂದ ಎಸ್‌ಒಪಿ ಉಲ್ಲಂಘನೆ: ತನಿಖಾ ವರದಿ ಕೇಳಿದ ಹೈಕೋರ್ಟ್‌

07:55 AM Jul 28, 2020 | mahesh |

ಬೆಂಗಳೂರು: ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಸಹಿತ ಕೋವಿಡ್‌-19 ಸುರಕ್ಷಾ ಮಾರ್ಗಸೂಚಿಗಳನ್ನು (ಎಸ್‌ಒಪಿ) ಉಲ್ಲಂ ಸುವ ರಾಜಕಾರಣಿಗಳು ಹಾಗೂ ಸಿನೆಮಾ ನಟರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಮೃದು ಧೋರಣೆ ತಾಳುತ್ತಿರುವ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ಇಂತಹ ಪ್ರಕರಣಗಳ ತನಿಖಾ ವರದಿ ಸಲ್ಲಿಸುವಂತೆ ತಾಕೀತು ಮಾಡಿದೆ.

Advertisement

ಈ ಕುರಿತು ಲೆಟ್ಜ್ಕಿಡ್‌ ಫೌಂಡೇಷನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಮಧ್ಯಾಂತರ ಅರ್ಜಿಯನ್ನು ಮುಖ್ಯ ನ್ಯಾ| ಎ.ಎಸ್‌. ಓಕ್‌ ಹಾಗೂ ನ್ಯಾ| ಸಚಿನ್‌ ಶಂಕರ್‌ ಮಗದಮ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರಕಾರದ ಧೋರಣೆಯನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ವೇಳೆ ಎಸ್‌ಒಪಿ ಉಲ್ಲಂ ಸಿದ ನಟ ದರ್ಶನ್‌, ಸಚಿವ ನಾಗೇಶ್‌ ಮತ್ತು ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ.ಕೆ. ಸೋಮಶೇಖರ್‌ ಹಾಗೂ ನಾಡಪ್ರಭು ಕೆಂಪೇಗೌಡ ಪುತ್ಥಳಿ ಶಂಕುಸ್ಥಾಪನೆ, ಮಾಜಿ ಸಚಿವ ಪಿ.ಟಿ. ಪರಮೇಶ್ವರ್‌ ನಾಯಕ್‌ ಪುತ್ರನ ಮದುವೆ ಕಾರ್ಯಕ್ರಮ, ಕೆಪಿಸಿಸಿ ಪ್ರತಿಭಟನೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ, ವಿಧಾನಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ ಮಗಳ ಮದುವೆ ಸಮಾರಂಭ, ಸಚಿವ ಬಿ. ಶ್ರೀರಾಮಲು ಅವರಿಂದ ಬಾಗಿನ ಅರ್ಪಣೆ ಕಾರ್ಯಕ್ರಮಗಳಲ್ಲಿ ಎಸ್‌ಒಪಿ ಉಲ್ಲಂಘಿಸಿದ ಸಂಬಂಧ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆಯನ್ನು ಆ.11ಕ್ಕೆ ಮುಂದೂಡಿತು.
ಅರ್ಜಿದಾರರ ಪರವಾಗಿ ವಕೀಲರಾದ ಪುತ್ತಿಗೆ ರಮೇಶ್‌ ಮತ್ತು ಜಿ.ಆರ್‌. ಮೋಹನ್‌ ವಾದ ಮಂಡಿಸಿದರು.

ಸಿಇಟಿ ಪ್ರಶ್ನಿಸಿ ಅರ್ಜಿ ಸಲ್ಲಿಕೆ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಸಿಇಟಿ ಪರೀಕ್ಷೆ ಗಳನ್ನು ಮುಂದೂಡುವಂತೆ ಸರಕಾರಕ್ಕೆ ನಿರ್ದೇಶಿಸಲು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲರಾದ ಎಸ್‌.ಪಿ. ಪ್ರದೀಪ್‌ ಕುಮಾರ್‌ ಹಾಗೂ ಎಸ್‌. ಹನುಮಂತೇಗೌಡ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಸಿಇಟಿ ರದ್ದತಿಗೆ ಆಗ್ರಹ
ಕೋವಿಡ್ ಹಿನ್ನೆಲೆಯಲ್ಲಿ ತಾಂತ್ರಿಕ ಮತ್ತು ಇತರ ವೃತ್ತಿಪರ ಶಿಕ್ಷಣದ ಪ್ರವೇಶಕ್ಕೆ ಜು. 30 ಮತ್ತು 31ರಂದು ನಡೆಯಲಿರುವ ಸಿಇಟಿ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಆಗ್ರಹಿಸಿದೆ.

Advertisement

ವೆಂಟಿಲೇಟರ್‌ ಹಗರಣ: ಅರ್ಜಿ
ಬೆಂಗಳೂರು: ವೆಂಟಿಲೇಟರ್‌, ಪಿಪಿಇ ಕಿಟ್‌ ಹಾಗೂ ಔಷಧಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್‌ ಆರೀಫ್‌ ಜಮೀಲ್‌ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next