Advertisement

ಸೊರಬ: ಪರೀಕ್ಷೆ ಭೀತಿಯಿಂದ ನೇಣಿಗೆ ಶರಣಾದ ವಿದ್ಯಾರ್ಥಿ

09:37 AM Jul 28, 2021 | Mithun PG |

ಸೊರಬ: ಪರೀಕ್ಷೆ ಎದುರಿಸಲು ಭೀತಿಗೊಳಗಾಗಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.

Advertisement

ನಿತೀನ್ ದಾಸ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಬೆಂಗಳೂರಿನಲ್ಲಿ ಬಿ.ಇ. ಶಿಕ್ಷಣ ಅಧ್ಯಯನ ಮಾಡುತ್ತಿದ್ದು, ಲಾಕ್ ಡೌನ್ ಹಿನ್ನಲೆಯಲ್ಲಿ ಮನೆಯಲ್ಲಿಯೇ ಆನ್ ಲೈನ್ ಶಿಕ್ಷಣ ಪಡೆಯುತ್ತಿದ್ದನು. ಎರಡನೇ ವರ್ಷದ ಬಿ.ಇ. ಪರೀಕ್ಷೆ ಎದುರಿಸುವ ಆತಂಕದಿಂದ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next