Advertisement

ಸೊರಬ ಪುರಸಭೆ : ಪುನಃ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

07:44 PM Jan 28, 2022 | Vishnudas Patil |

ಸೊರಬ: ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಇಂದು ಪುರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಈರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಪುನಃ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

Advertisement

ಪುರಸಭೆ ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಈರೇಶ್ ಮೇಸ್ತ್ರಿ ಹಾಗೂ ಕಾಂಗ್ರೆಸ್‍ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. 12 ಸದಸ್ಯರ ಬಲಹೊಂದಿರುವ ಹೊಂದಿದ್ದು, ಬಿಜೆಪಿಯ 6, ಕಾಂಗ್ರೆಸ್ 4, ಪಕ್ಷೇತರ ಮತ್ತು ಜೆಡಿಎಸ್‍ನ ತಲಾ ಒಬ್ಬರು ಸದಸ್ಯರಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲಾ ಸದಸ್ಯರು ಹಾಜರಿದ್ದು ಕೈ ಎತ್ತುವ ಮೂಲಕ ಮತ ಚಲಾಯಿಸಿದರು. ಕಾಂಗ್ರೆಸ್ ಸುಲ್ತಾನ ಬೇಗಂ ಕೇವಲ ನಾಲ್ಕು ಮತಗಳನ್ನು ಪಡೆದರೆ, ಬಿಜೆಪಿಯ ಈರೇಶ್ ಮೇಸ್ತ್ರಿ 8 ಮತಗಳನ್ನು ಪಡೆದರು. ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಾಗರ ಉಪವಿಭಾಗಾಧಿಕಾರಿ ಡಾ. ಎಲ್. ನಾಗರಾಜ್ ಅವರು ಈರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನೂತನ ಅಧ್ಯಕ್ಷರನ್ನು ಅಭಿನಂದಿಸಿ ನಂತರ ಪುರಸಭೆ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮ ವ್ಯಕ್ತಪಡಿಸಿದರು. ಚುನಾವಣೆ ನಡೆಯುವ ಪುರಸಭೆ ಸುತ್ತ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಿ, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿರಂಜನ ಕುಪ್ಪಗಡ್ಡೆ, ಗುರುಪ್ರಸನ್ನಗೌಡ, ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಕಡಸೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ, ಪ್ರಮುಖರಾದ ಶರಾವತಿ ಸಿ. ರಾವ್, ಶ್ರೀನಾಥ್, ಶಿವರಾಜು, ವಿ. ಮಹೇಶ್, ಗೀತಾ ಮಲ್ಲಿಕಾರ್ಜುನ್, ಪಾಣಿ ರಾಜಪ್ಪ, ಈಶ್ವರ ಚನ್ನಪಟ್ಟಣ, ಡಿ. ಶಿವಯೋಗಿ, ವಿಜೇಂದ್ರ ಪಾಟೀಲ್, ಯೋಗೇಶ್ ವಕೀಲ, ಉಮೇಶ್ ಉಡುಗಣಿ, ಸಂಜೀವ ಆಚಾರ್, ಮೋಹನ್ ಹಿರೇಶಕುನ, ಪುಟ್ಟರಾಜ ಮೇಸ್ತ್ರಿ, ರಜನಿನಾಯ್ಕ್ ಸೇರಿದಂತೆ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next