Advertisement
ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ಪ್ಲಾಸ್ಟಿಕ್ ವಸ್ತುಗಳ ನಿರ್ವಹಣೆ ಮತ್ತು ನಿಬಂಧನೆ ನಿಯಮ 2016 ರ ಕಾಯ್ದೆಯಡಿ ಪ್ಲಾಸ್ಟಿಕ್ ಕೈಚೀಲಗಳನ್ನು ನಿಷೇಧಿಸಿದ್ದರೂ ಕೆಲವು ಅಂಗಡಿಗಳ ಮಾಲೀಕರು ಎಗ್ಗಿಲ್ಲದೇ ಪ್ಲಾಸ್ಟಿಕ್ ಕವರ್‌ಗಳನ್ನು ಮಾರಾಟ ಮಾಡುವುದು, ಗ್ರಾಹಕರಿಗೆ ಸಾಮಗ್ರಿಗಳನ್ನು ಕೊಂಡೊಯ್ಯಲು ನೀಡುತ್ತಿದ್ದರು. ಪಟ್ಟಣದ ಅಂಗಡಿಗಳ ಮಾಲೀಕರಿಗೆ ಹಲವಾರು ಬಾರಿ ತಿಳುವಳಿಕೆ ನೀಡಿ, ಈ ಹಿಂದೆ ಮೂರ್‍ನಾಲ್ಕು ಬಾರಿ ದಾಳಿ ನಡೆಸಿದ್ದರೂ ಕೂಡ ಮತ್ತೆ ಪ್ಲಾಸ್ಟಿಕ್ ಚೀಲಗಳನ್ನು ಮಾರಾಟ ಮಾಡುತ್ತಿದ್ದಾರೆ. ಇನ್ನು ಮುಂದೆ ಇಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಹಾಗೂ ದಂಡ ವಿಧಿಸಿ ಕೇಸು ದಾಖಲಿಸಿಕೊಳ್ಳಲಾಗುವುದು. ಅಲ್ಲದೆ ಸಾರ್ವಜನಿಕರು ಕೂಡಾ ಪ್ಲಾಸ್ಟಿಕ್ ಕೈ ಚೀಲಗಳಲ್ಲಿ ಸಾಮಾನುಗಳನ್ನು ತೆಗೆದುಕೊಂಡು ಹೋದಲ್ಲಿ ಅಂತಹವರ ವಿರುದ್ಧವೂ ಕೇಸು ದಾಖಲು ಮಾಡಲಾಗುವುದು. ಆದ್ದರಿಂದ ಈ ಬಗ್ಗೆ ಸಾರ್ವಜನಿಕರು ತಿಳುವಳಿಕೆ ಹೊಂದಬೇಕು ಎಂದು ಮುಖ್ಯಾಧಿಕಾರಿ ಜಗದೀಶ ನಾಯ್ಕ ತಿಳಿಸಿದ್ದಾರೆ.
Advertisement
ಅಂಗಡಿಗಳ ಮೇಲೆ ದಾಳಿ; ಪ್ಲಾಸ್ಟಿಕ್ ಚೀಲ ವಶ
12:20 PM Jul 06, 2019 | Naveen |
Advertisement
Udayavani is now on Telegram. Click here to join our channel and stay updated with the latest news.