Advertisement

SC/ST ಪೊಲೀಸ್ ಠಾಣೆಯಲ್ಲಿ ED ವಿರುದ್ಧವೇ ಪ್ರಕರಣ ದಾಖಲಿಸಿದ ಸೊರೇನ್!

05:21 PM Jan 31, 2024 | Team Udayavani |

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಎಸ್‌ಸಿ/ಎಸ್‌ಟಿ ಪೊಲೀಸ್ ಠಾಣೆಯಲ್ಲಿ ಹಿರಿಯ ಇಡಿ ಸಿಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

Advertisement

ಸೋರೆನ್ ಅವರ ದೆಹಲಿ ನಿವಾಸದಲ್ಲಿ ಕೇಂದ್ರ ತನಿಖಾ ಸಂಸ್ಥೆ ಇತ್ತೀಚೆಗೆ ನಡೆಸಿದ ಶೋಧ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕೆಲವು ಹಿರಿಯ ಇಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಾವು ಮುಖ್ಯಮಂತ್ರಿಯಿಂದ ಅರ್ಜಿಯನ್ನು ಪಡೆದುಕೊಂಡಿದ್ದೇವೆ” ಎಂದು ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕ ಚಂದನ್ ಕುಮಾರ್ ಸಿನ್ಹಾ ಪಿಟಿಐಗೆ ತಿಳಿಸಿದ್ದಾರೆ. ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸಿನ್ಹಾ ಯಾವುದೇ ಇತರ ವಿವರಗಳನ್ನು ನೀಡಿಲ್ಲ.

ಜಾರ್ಖಂಡ್‌ನಲ್ಲಿನ ಭೂ ವ್ಯವಹಾರಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯ ಭಾಗವಾಗಿ ಸೋಮವಾರ ಸೋರೆನ್ ಅವರ ದೆಹಲಿ ನಿವಾಸವನ್ನು ಇಡಿ ತಂಡ ಶೋಧಿಸಿ 36 ಲಕ್ಷ ರೂ., ಒಂದು SUV ಮತ್ತು ಕೆಲವು “ದೋಷಪೂರಿತ” ದಾಖಲೆಗಳನ್ನು ವಶಪಡಿಸಿಕೊಂಡಿದೆ.ಸೊರೇನ್ ಪ್ರಶ್ನಿಸಲು ಸುಮಾರು 13 ಗಂಟೆಗಳ ಕಾಲ ಅಲ್ಲಿಯೇ ಮೊಕ್ಕಾಂ ಹೂಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್ ಅವರನ್ನು ಪ್ರಸ್ತುತ ಇಡಿ ಅಧಿಕಾರಿಗಳು ರಾಂಚಿಯ ನಿವಾಸದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next