Advertisement
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ನೂತನ ಹಾಸ್ಟೆಲ್ ಮಂಗಳೂರಿನಲ್ಲಿ ಆರಂಭವಾಗಲಿದೆ.
Related Articles
Advertisement
ಪ್ರಾರಂಭದಲ್ಲಿ 200 ವಿದ್ಯಾರ್ಥಿಗಳಿಗೆ ಸೀಮಿತ
ಸದ್ಯ ಪ್ರಾರಂಭಿಕವಾಗಿ 200 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಿ ಮಂಗಳೂರು ಹಾಸ್ಟೆಲ್ ಆರಂಭಕ್ಕೆ ಅನುಮತಿ ದೊರೆತಿದೆ. ಇದರಂತೆ 100 ಬಾಲಕರು, 100 ಬಾಲಕಿಯರಿಗೆ ಅನುಮತಿ ನೀಡಲಾಗಿದೆ. ಬಿಜೈ ಹಾಗೂ ದೇರಳಕಟ್ಟೆಯಲ್ಲಿ ಬಾಲಕ-ಬಾಲಕಿಯರಿಗೆ ಪ್ರತ್ಯೇಕವಾಗಿ ತಾತ್ಕಾಲಿಕ ಹಾಸ್ಟೆಲ್ ಆರಂಭವಾಗಲಿದೆ.
ಮಂಗಳೂರು ವಿ.ವಿ. ಕ್ಯಾಂಪಸ್‌ನಲ್ಲಿ ಹೊಸ ಕಟ್ಟಡ?
ಸದ್ಯ ಬಾಡಿಗೆ ಕಟ್ಟಡದಲ್ಲಿ ನಡೆಸುವ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಸತಿ ನಿಲಯವನ್ನು ಮುಂದೆ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ವಂತ ಕಟ್ಟಡ ನಿರ್ಮಿಸಿ ನಡೆಸಲು ಇಲಾಖೆ ನಿರ್ಧರಿಸಿದೆ. ಸುಮಾರು 8 ಎಕ್ರೆ ಭೂಮಿಯಲ್ಲಿ 5 ಕಟ್ಟಡಗಳನ್ನು ಇಲ್ಲಿ ನಿರ್ಮಿಸಲಾಗುತ್ತದೆ. ಪ್ರತೀ ಕಟ್ಟಡದಲ್ಲಿ 200 ವಿದ್ಯಾರ್ಥಿಗಳು ಇರಲಿದ್ದಾರೆ. ಪ್ರತೀ ಪಿಜಿ ವಿದ್ಯಾರ್ಥಿಗೆ ಕಲಿಕೆಗೆ ಸೂಕ್ತವಾಗುವ ಸ್ಥಳಾವಕಾಶ ಇಲ್ಲಿ ನೀಡಲಾಗುತ್ತದೆ. ಲೋಕೋಪಯೋಗಿ ಇಲಾಖೆ ಮೂಲಕ ಈ ಕಟ್ಟಡ ನಿರ್ಮಾಣ ಯೋಜನೆ ನಡೆಯಲಿದೆ. ಕಟ್ಟಡ ಪೂರ್ಣವಾದ ಬಳಿಕ ಬಾಡಿಗೆ ವ್ಯವಸ್ಥೆಯಲ್ಲಿರುವ ವಿದ್ಯಾರ್ಥಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುತ್ತದೆ.
ಬಾಡಿಗೆ ಕಟ್ಟಡದಲ್ಲಿ ಆರಂಭ: ಬಿಜೈಯಲ್ಲಿ 100 ಬಾಲಕಿಯರಿಗೆ, ದೇರಳಕಟ್ಟೆಯಲ್ಲಿ 100 ಬಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಯೋಜನೆಯನ್ನು ಸದ್ಯ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಆರಂಭಿಸಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. – ಸಿದ್ಧಲಿಂಗೇಶ್ ಬೇವಿನಮಟ್ಟಿ, ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ದ.ಕ.
ಸಹಬಾಳ್ವೆಯ ಹಾಸ್ಟೆಲ್: ಎಲ್ಲ ಜಾತಿ-ಸಮುದಾಯದ ವಿದ್ಯಾರ್ಥಿಗಳು ಒಂದೇ ಕಡೆ ಇದ್ದು ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದ ಐದು ಕಡೆ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಉದ್ದೇಶಿಸಲಾಗಿದೆ. ಕರಾವಳಿ ಭಾಗದಲ್ಲಿಯೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಇದು ಕಾರ್ಯರೂಪಕ್ಕೆ ಬರುತ್ತಿದೆ. ಸದ್ಯ ಬಾಡಿಗೆ ಕಟ್ಟಡದಲ್ಲಿ ನಿರ್ವಹಿಸಿ ಬಳಿಕ ಹೊಸ ಕಟ್ಟಡ ನಿರ್ಮಾಣ ಮಾಡಲಾಗುವುದು. – ಕೋಟ ಶ್ರೀನಿವಾಸ ಪೂಜಾರಿ, ಸಚಿವರು, ಸಮಾಜ ಕಲ್ಯಾಣ ಇಲಾಖೆ
-ದಿನೇಶ್ ಇರಾ