Advertisement

ಧರ್ಮಾಧಿಕಾರಿಗಳ ವಿರುದ್ದ ಅವಹೇಳನಕಾರಿ ಮಾತು ನಿಲ್ಲಿಸಿ: ಆಚಾರ್ಯ ಗುಣಧರನಂದಿ ಮಹಾರಾಜರು

03:03 PM Aug 02, 2023 | Team Udayavani |

ಹುಬ್ಬಳ್ಳಿ: ಸೌಜನ್ಯ ಪ್ರಕರಣದಲ್ಲಿ ವಿನಾಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ದ ಅವಹೇಳನಕಾರಿಯಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ ಅವರ ಸಂಬಂಧಿಕರು ಭಾಗಿಯಾಗಿದ್ದರೆ ಅವರಿಗೂ ಶಿಕ್ಷೆಯಾಗಲಿ. ಆದರೆ ಅವಮಾನಕಾರಿ ಮಾತುಗಳನ್ನಾಡುವುದು ಸರಿಯಲ್ಲ ಎಂದು ವರೂರು ನವಗ್ರಹತೀರ್ಥ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ತಿಳಿಸಿದರು.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುವುದರಲ್ಲಿ ಎರಡು ಮಾತಿಲ್ಲ. ಆದರೆ ಶ್ರೀಕ್ಷೇತ್ರ ಹಾಗೂ ಅಲ್ಲಿನ ಧರ್ಮಾಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ನಮಗೆ ನ್ಯಾಯಾಂಗ, ಶಾಸಕಾಂಗ ಹಾಗೂ ಕಾರ್ಯಾಂಗದ ಮೇಲೆ ಸಂಪೂರ್ಣ ನಂಬಿಕೆಯಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಮನಪರಿವರ್ತನೆಯಂತಹ ಶಿಕ್ಷೆಯಾಗಲಿ. ಅದರೆ ಕೆಲವರು ಕ್ಷೇತ್ರ ಹಾಗೂ ಧರ್ಮಾಧಿಕಾರಿಗಳ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು ಬೇಡಬೇಕು ಎಂದರು.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಹೆಚ್ಚಾಗುತ್ತಿದೆ‌. ಬೆಂಗಳೂರು ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲನೆ ಮಾಡಬೇಕು. ಈ ನಿಟ್ಟಿನಲ್ಲಿ ಸರಕಾರ ಗಮನಹರಿಸಬೇಕು ಎಂದು ಮನವಿ ಮಾಡುತ್ತೇನೆ. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪುನಃ ತನಿಖೆಯಾಗಲಿ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಪೊಲೀಸ್, ಸಿಬಿಐ ವತಿಯಿಂದ ಆಗಬೇಕಿತ್ತು. ಆದರೆ ಆ ಕೆಲಸ ಆಗದಿರುವುದು ದುರ್ಧೈವದ ಸಂಗತಿಯಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next