“ಹೊಂದಿಸಿ ಬರೆಯಿರಿ’ ಚಿತ್ರ ಫೆ.10ರಂದು ತೆರೆ ಕಾಣುತ್ತಿದೆ. ರಾಮೇನಹಳ್ಳಿ ಜಗನ್ನಾಥ್ ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ಈಗ ಚಿತ್ರ ತಂಡ “ಸೋಲ್ ಆಫ್ ಹೊಂದಿಸಿ ಬರೆಯಿರಿ’ ಎಂಬ ಹಾಡನ್ನು ಬಿಡುಗಡೆ ಮಾಡಿದೆ.
“ಸೋಲ್ ಆಫ್ ಹೊಂದಿಸಿ ಬರೆಯಿರಿ’ ಹಾಡಿಗೆ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ಬರೆದಿದ್ದು, ಐಶ್ವರ್ಯಾ ರಂಗರಾಜನ್ ಹಾಡಿಗೆ ದನಿಯಾಗಿದ್ದಾರೆ. ಇಡೀ ಸಿನಿಮಾದ ಆಶಯವನ್ನು ಕಟ್ಟಿಕೊಡುವ ಈ ಹಾಡು ಚಿತ್ರದಲ್ಲಿ ಬಹಳ ಮುಖ್ಯ ಪಾತ್ರವಹಿಸಲಿದ್ದು, ಜೋ ಕೋಸ್ಟ ಸಂಗೀತ ಸಂಯೋಜನೆ ಇದೆ.
ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎಂಬ ಎಳೆಯ ಸುತ್ತ ಹೆಣೆಯಲಾದ ಕಥಾಹಂದರ ಈ ಚಿತ್ರದಲ್ಲಿದೆ. ಐದು ಜನ ಸ್ನೇಹಿತರ ಬದುಕಿನ ಕಥೆ ಹಾಗೂ ಭಾವನಾತ್ಮಕ ಜರ್ನಿಯನ್ನು ಒಳಗೊಂಡ ಈ ಚಿತ್ರದಲ್ಲಿ ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತಾ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಮುಖ್ಯ ಭೂಮಿಕೆಯಲ್ಲಿದ್ದಾರೆ.
ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಜೊತೆ ಸ್ನೇಹಿತರೊಡಗೂಡಿ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಚಿತ್ರದಲ್ಲಿ ಸನ್ನಿವೇಶಕ್ಕೆ ತಕ್ಕಂತೆ ಎಂಟು ಹಾಡುಗಳಿದ್ದು ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿದೆ. ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. “ಸಂಡೇ ಸಿನಿಮಾಸ್’ ಬ್ಯಾನರ್ ಚಿತ್ರ ನಿರ್ಮಾಣವಾಗಿದೆ