Advertisement

Soumya Vishwanathan ಹತ್ಯೆ: ದೆಹಲಿ ಕೋರ್ಟ್ ನಿಂದ 4 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

06:12 PM Nov 25, 2023 | Vishnudas Patil |

ಹೊಸದಿಲ್ಲಿ: 2008 ರಲ್ಲಿ ನಡೆದ ಟಿವಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

Advertisement

ಶಿಕ್ಷೆಯ ಪ್ರಮಾಣವನ್ನು ಆದೇಶಿಸಿದ ನ್ಯಾಯಾಲಯ, ಅಪರಾಧವು ಅಪರೂಪದ ಅಪರೂಪದ ಪ್ರಕರಣಗಳ ವರ್ಗಕ್ಕೆ ಬರುವುದಿಲ್ಲ ಎಂದು ಹೇಳಿ ಮರಣದಂಡನೆಗೆ ಕೋರಿಕೆಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದೆ.

ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಐದನೇ ಅಪರಾಧಿ ಅಜಯ್ ಸೇಥಿಗೆ ಮೂರು ವರ್ಷಗಳ ಸರಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಪ್ರಮುಖ ಇಂಗ್ಲಿಷ್ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೌಮ್ಯಾ ವಿಶ್ವನಾಥನ್ ಅವರು ಸೆ 30, 2008 ರ ಬೆಳಗ್ಗೆ ದಕ್ಷಿಣ ದೆಹಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ ಕೆಲಸದಿಂದ ಮನೆಗೆ ಮರಳುತ್ತಿದ್ದಾಗ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ದರೋಡೆಯೇ ಉದ್ದೇಶ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದು, ಅಕ್ಟೋಬರ್ 18 ರಂದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಮತ್ತು ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ನಿಬಂಧನೆಗಳ ಅಡಿಯಲ್ಲಿ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಕುಮಾರ್ ಅವರನ್ನು ನ್ಯಾಯಾಲಯವು ಯಾವುದೇ ವ್ಯಕ್ತಿಯ ಸಾವಿಗೆ ಕಾರಣವಾಗುವ ಸಂಘಟಿತ ಅಪರಾಧವನ್ನು ಎಸಗಲು ಅಪರಾಧಿಗಳೆಂದು ಘೋಷಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next