ಕೊಲ್ಕತ್ತಾ: ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಚಾಂಪಿಯನ್ ಪಟ್ಟಕ್ಕೆ ಸೌರಾಷ್ಟ್ರ ಮತ್ತು ಬಂಗಾಳದ ನಡುವೆ ನಡೆದ ಹಣಾಹಣಿಯಲ್ಲಿ ಸೌರಾಷ್ಟ್ರ ಭರ್ಜರಿ ಗೆಲುವು ಸಾಧಿಸಿದ್ದು, ರಣಜಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದ ಮೊದಲ ಇನ್ನಿಂಗ್ಸ್‌ನ ಬಂಗಾಳ 54.1 ಓವರ್‌ಗಳಲ್ಲಿ 174 ರನ್ ಗಳಿಸಿ ಆಲೌಟ್ ಆಗಿತ್ತು. ಬಂಗಾಳ ನೀಡಿದ ಗುರಿಯನ್ನು ಬೆನ್ನತ್ತಿದ ಸೌರಾಷ್ಟ್ರ110 ಓವರ್‌ಗಳಲ್ಲಿ 404 ರನ್ ಬಾರಿಸುವ ಮೂಲಕ 230 ರನ್‌ಗಳ ಮುನ್ನಡೆ ಸಾಧಿಸಿತ್ತು.
ಎರಡನೇ ಇನ್ನಿಂಗ್ಸ್‌ನಲ್ಲಿ ಬಂಗಾಳ 240 ರನ್ ಗಳಿಸಿ ಆಲೌಟ್ ಆಗಿದ್ದು 11 ರನ್‌ಗಳ ಗುರಿ ಬೆನ್ನತ್ತಿದ ಸೌರಾಷ್ಟ್ರ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿ ವಿಜಯಿಯಾಗಿ ಹೊರಹುಮ್ಮಿತು.
ಭರ್ಜರಿ ಫಾರ್ಮ್‌ನಲ್ಲಿರುವ ಜಯದೇವ್ ಉನಾದ್ಕಟ್ ಎರಡೂ ಇನ್ನಿಂಗ್ಸ್‌ಗಳಲ್ಲಿ 9 ವಿಕೆಟ್ ಪಡೆಯುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಟೂರ್ನಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಅರ್ಪಿತ್ ವಾಸವಡ ಸರಣಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಇದನ್ನೂ ಓದಿ:
ವನಿತಾ ಟಿ20 ವಿಶ್ವಕಪ್: ಕೊನೆಗೂ ಗೆದ್ದ ಕಿವೀಸ್, ವಿಂಡೀಸ್