Advertisement

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್

12:07 PM Jan 31, 2021 | Team Udayavani |

ಕೋಲ್ಕತ್ತಾ: ಅನಾರೋಗ್ಯದ ಕಾರಣದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆ ಸೇರಿದ್ದ ಬಿಸಿಸಿಐ ಅಧ್ಯಕ್ಷ, ಮಾಜಿ ನಾಯಕ ಸೌರವ್ ಗಂಗೂಲಿ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ಕಳೆದ 20 ದಿನಗಳ ಅಂತರದಲ್ಲಿ ಸೌರವ್ ಗಂಗೂಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಳೆದ ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಿ, ಎರಡು ಸ್ಟೆಂಟ್ ಅಳವಡಿಸಲಾಗಿತ್ತು.

ಇದನ್ನೂ ಓದಿ:ಋತುವಿನ ಮೊದಲ ಕಂಬಳ ಯಶಸ್ವಿ: ಇಲ್ಲಿದೆ ಹೊಕ್ಕಾಡಿಗೋಳಿ ಕಂಬಳದ ಫಲಿತಾಂಶ ಪಟ್ಟಿ

ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ, ಡಾ.ಅಶ್ವಿನ್ ಮೆಹ್ತಾ ಸೇರಿದಂತೆ ವೈದ್ಯರ ತಂಡ ಕಳದ ಗುರುವಾರ ಶಸ್ತ್ರಚಿಕಿತ್ಸೆ ನಡೆಸಿತ್ತು.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರಾಗಿರುವ ಸೌರವ್ ಗಂಗೂಲಿ ಸದ್ಯ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next