ಜೋಹಾನ್ಸ್ ಬರ್ಗ್: ಮುಂಬರುವ ಭಾರತದ ವಿರುದ್ಧದ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡವನ್ನು ಪ್ರಕಟಿಸಲಾಗಿದೆ. ಏಕದಿನ ವಿಶ್ವಕಪ್ ನಲ್ಲಿ ತಂಡವನ್ನು ಮುನ್ನಡೆಸಿದ್ದ ತೆಂಬ ಬವುಮಾ ಅವರು ಸ್ಥಾನ ಕಳೆದುಕೊಂಡಿದ್ದು, ಏಡನ್ ಮಾರ್ಕ್ರಮ್ ಅವರನ್ನು ನೂತನ ನಾಯಕನನ್ನಾಗಿ ನೇಮಿಸಲಾಗಿದೆ. ಟಿ20 ತಂಡವನ್ನೂ ಅವರೇ ಮುನ್ನಡೆಸಲಿದ್ದಾರೆ. ಬವುಮಾ ಅವರು ಟೆಸ್ಟ್ ನಾಯಕನಾಗಿ ಮುಂದುವರಿದಿದ್ದಾರೆ.
ಭಾರತ ವಿರುದ್ಧದ ವೈಟ್-ಬಾಲ್ ಸರಯಿಂದ ಬವುಮಾ ಮತ್ತು ವೇಗದ ಬೌಲರ್ ಕಗಿಸೊ ರಬಾಡ ಅವರನ್ನು ಹೊರಗಿಡಲಾಗಿದೆ, ಏಕೆಂದರೆ ಟೆಸ್ಟ್ ಪಂದ್ಯಗಳಿಗೆ ಹೆಚ್ಚು ಒತ್ತು ನೀಡುತ್ತಿದೆ ಎಂದು ಸಿಎಸ್‌ಎ ತಿಳಿಸಿದೆ.
ದಕ್ಷಿಣ ಆಫ್ರಿಕಾ ತಂಡವು ಹೊಸ ಮುಖಗಳಿಗೆ ಮಣೆಹಾಕಿದೆ. ಮಿಹ್ಲಾಲಿ ಮ್ಪೊಂಗ್ವಾನಾ, ಡೇವಿಡ್ ಬೆಡಿಂಗ್‌ಹ್ಯಾಮ್ ಮತ್ತು ನಾಂಡ್ರೆ ಬರ್ಗರ್ ತಮ್ಮ ಚೊಚ್ಚಲ ರಾಷ್ಟ್ರೀಯ ತಂಡದ ಕರೆ ಪಡೆದಿದ್ದಾರೆ. ವೇಗಿ ನಾಂಡ್ರೆ ಬರ್ಗರ್ ಮೂರು ಮಾದರಿಯ ತಂಡಗಳಲ್ಲಿ ಸ್ಥಾನಗಳನ್ನು ಪಡೆದುಕೊಂಡರು.
ತಂಡಗಳು
ಟಿ20 ತಂಡ: ಏಡೆನ್ ಮಾರ್ಕ್ರಾಮ್ (ನಾ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ (1 ನೇ ಮತ್ತು 2 ನೇ ಟಿ20), ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್ (1 ನೇ ಮತ್ತು 2 ನೇ ಟಿ20), ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ (1ನೇ ಮತ್ತು 2ನೇ ಟಿ20), ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಲಿಜಾದ್ ವಿಲಿಯಮ್ಸ್.
ಏಕದಿನ ತಂಡ: ಏಡೆನ್ ಮಾರ್ಕ್ರಾಮ್ (ನಾ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ನಾಂಡ್ರೆ ಬರ್ಗರ್, ಟೋನಿ ಡಿ ಜೊರ್ಜಿ, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಮ್ಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ ಮತ್ತು ಲಿಜಾದ್ ವಿಲಿಯಮ್ಸ್.
ಟೆಸ್ಟ್ ತಂಡ: ತೆಂಬ ಬವುಮಾ (ನಾ), ಡೇವಿಡ್ ಬೆಡಿಂಗ್‌ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಟೋನಿ ಡಿ ಜೊರ್ಜಿ, ಡೀನ್ ಎಲ್ಗರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಕೈಲ್ ವೆರ್ರೆನ್ನೆ.