Advertisement
ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ 20 ಓವರ್ ಗಳಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಅಮೋಘ ಶತಕ ದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು. 202 ರನ್ ಗಳ ಸವಾಲು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಭಾರತದ ಬಿಗಿ ಬೌಲಿಂಗ್ ದಾಳಿಗೆ ಸಿಲುಕಿ ನಲುಗಿತು. 13.5 ಓವರ್ ಗಳಲ್ಲಿ 95 ರನ್ ಗಳಿಗೆ ಆಲೌಟಾಯಿತು.
Related Articles
ಯಶಸ್ವಿ ಜೈಸ್ವಾಲ್ 60(41ಎಸೆತ) ರನ್ ಗಳಿಸಿ ಔಟಾದರು. ಶುಭಮನ್ ಗಿಲ್ 12, ತಿಲಕ್ ವರ್ಮ ಶೂನ್ಯಕ್ಕೆ ಔಟಾದರು. ಅಮೋಘ ಆಟವಾಡಿ ಅಬ್ಬರಿಸಿದ ಸೂರ್ಯ 56 ಎಸೆತಗಳಲ್ಲಿ100 ರನ್ ಪೂರ್ಣ ಗಳಿಸಿ ಔಟಾದರು. 7 ಬೌಂಡರಿ ಮತ್ತು 8 ಭರ್ಜರಿ ಸಿಕ್ಸರ್ ಸಿಡಿಸಿದರು. ರಿಂಕು ಸಿಂಗ್ 14 ರನ್ ಗಳಿಸಿ ಔಟಾದರು.
Advertisement
ಕೇಶವ ಮಹಾರಾಜ್ ಮತ್ತು ಲಿಜಾಡ್ ವಿಲಿಯಮ್ಸ್ ತಲಾ 2 ವಿಕೆಟ್ ಪಡೆದರು. ನಾಂದ್ರೆ ಬರ್ಗರ್,ತಬ್ರೈಜ್ ಶಮ್ಸಿ ತಲಾ ಒಂದು ವಿಕೆಟ್ ಪಡೆದರು.
ಟಿ 20ಯ ಆಗ್ರ ಶ್ರೇಯಾಂಕದ ಬ್ಯಾಟ್ಸ್ ಮ್ಯಾನ್ ಸೂರ್ಯ ಕುಮಾರ್ ಯಾದವ್ ಅವರು ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.