Advertisement

ಓಡಿ ಓಡಿ.. ದಕ್ಷಿಣ ಕನ್ನಡ ಪೊಲೀಸರ ಡ್ರೋನ್ ನಲ್ಲಿ ಸೆರೆಯಾಯ್ತು ಲಾಕ್ ಡೌನ್ ಓಟದ ದೃಶ್ಯ

09:12 AM Apr 12, 2020 | keerthan |

ಮಂಗಳೂರು: ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಹೇರಲಾಗಿದ್ದು,  ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹದ್ದಿನ ಕಣ್ಣು ಹಾಯಿಸಿದ್ದಾರೆ.

Advertisement

ವಿಟ್ಲ, ಬಂಟ್ವಾಳ, ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರೋನ್ ಕ್ಯಾಮರಾ ಮೂಲಕ ಹದ್ದಿನ ಕಣ್ಣಿಟ್ಟಿದ್ದು, ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಇಲ್ಲಿನ ಗಲ್ಲಿಗಲ್ಲಿಗಳಲ್ಲೂ ಡ್ರೋನ್ ಕ್ಯಾಮೆರಾದ ಮೂಲಕ ಕಣ್ಗಾವಲು ಇರಿಸಲಾಗಿದೆ. ಮೈದಾನ, ಗದ್ಡೆ ಸೇರಿ ಹಲವೆಡೆ ಕ್ರಿಕೆಟ್ ಆಡುವವರ, ಗುಂಪು ಸೇರುವವರ ಪತ್ತೆಗೆ ಬಳಕೆ ಮಾಡಲಾಗುತ್ತಿದೆ. ‘

ಪೊಲೀಸರ ಡ್ರೋನ್ ಕ್ಯಾಮಾರಾ ಕಂಡು ಬೈಕ್ ಸವಾರರು ಅರ್ಧ ದಾರಿಯಿಂದಲೇ ವಾಪಸಾಗುವ ದೃಶ್ಯವೂ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗುಂಪು ಸೇರಿ ಮಾತನಾಡುವ, ಕ್ರಿಕೆಟ್ ಆಡುವ ಯುವಕರೂ ದಿಕ್ಕಾಪಾಲಾಗಿ ಓಡಿದ್ದಾರೆ. ಈ ಮೂಲಕ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡುವ ಜನರನ್ನು ನಿಯಂತ್ರಿಸಲು ಡ್ರೋನ್ ಕ್ಯಾಮೆರಾದ ಬಳಕೆ ಮಾಡಿ ದಕ್ಷಿಣಕನ್ನಡ ಜಿಲ್ಲಾ ಪೋಲಿಸರು ಹೊಸದೊಂದು ಪ್ರಯತ್ನವನ್ನು ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next