ಸಿಯೋಲ್(ದಕ್ಷಿಣ ಕೊರಿಯಾ): ದಕ್ಷಿಣ ಕೊರಿಯಾದ ಚುಂಗ್ಜು ನಲ್ಲಿ ಇಸ್ರೇಲ್ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ ಹೊಡದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 34 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ.
62 ವರ್ಷದ ಇಸ್ರೇಲ್ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡ ಏಳು ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಗಂಭೀರ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರವಾಸಿ ತಾಣವಾದ ಜಿಯೊಂಗ್ಜು ನಿಂದ ಸುವಾನ್ಬೊ ಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬಸ್ ಚಾಲಕ ಗೇರ್ ಬದಲಾಯಿಸುವಾಗ ಬಸ್ ಹಿಂದಕ್ಕೆ ಉರುಳಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಸಚಿವಾಲಯ ತಿಳಿಸಿದೆ.
ನಿಖರವಾದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.