Advertisement

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಓರ್ವ ಸಾವು, ಐವರಿಗೆ ಗಂಭೀರ ಗಾಯ

10:02 AM Oct 14, 2019 | Mithun PG |

ಮುಂಬೈ: ದಕ್ಷಿಣ ಮುಂಬೈನ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ  ಅವಘಡವಾದ ಕಾರಣ ಓರ್ವ ಸಾವನ್ನಪ್ಪಿ, ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಐವರು ಗಾಯಗೊಂಡಿದ್ದಾರೆ.

Advertisement

ಪದ್ಮಸಿ ರಸ್ತೆಯಲ್ಲಿರುವ ಆದಿತ್ಯಾ ಆರ್ಕೆಡ್ ಕಟ್ಟಡದಲ್ಲಿ ಮುಂಜಾನೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, 9 ಗಂಟೆಯ ಹೊತ್ತಿಗೆ ನಾಲ್ಕನೇ ಅಂತಸ್ತಿಗೂ ವ್ಯಾಪಿಸಿದೆ. ಪರಿಣಾಮವಾಗಿ ಕಟ್ಟದಲ್ಲಿರುವ ಜನರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ಸಿಬ್ಬಂದಿಗಳು ಕೂಡ  ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದಾರೆ. ಈ ವೇಳೆ ಓರ್ವ ಸಾವನ್ನಪ್ಪಿದ್ದರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಟ್ಟವಾದ ಹೊಗೆ ರಕ್ಷಣಾ ಕಾರ್ಯಕ್ಕೆ ತೊಡಕುಂಟುಮಾಡುತ್ತಿರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

 

Advertisement

Udayavani is now on Telegram. Click here to join our channel and stay updated with the latest news.

Next