Advertisement

South-West Graduates, ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ

11:15 PM Oct 06, 2023 | Team Udayavani |

ಉಡುಪಿ: ಭಾರತ ಚುನಾವಣ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯಾಗಿ ಹಾಗೂ ಈ ಚುನಾವಣ ಕ್ಷೇತ್ರ ವ್ಯಾಪ್ತಿಗೊಳಪಡುವ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ (ಹೊನ್ನಾಳಿ, ನ್ಯಾಮತಿ ಮತ್ತು ಚನ್ನಗಿರಿ ತಾಲೂಕು), ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಮತ್ತು ಆಯಾ ಉಪವಿಭಾಗಕ್ಕೆ ಸಂಬಂಧಪಟ್ಟ ಎಲ್ಲ ಸಹಾಯಕ ಆಯುಕ್ತರು, ಎಲ್ಲ ತಾಲೂಕಿನ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ನೇಮಿಸಲಾಗಿದೆ.

Advertisement

ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯ ಪ್ರಾರಂಭವಾಗಿದೆ. ಈ ಹಿಂದಿನ ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರು ಸಹ ನಮೂನೆ 18ರಲ್ಲಿ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ನಮೂನೆ 19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸ್ವೀಕರಿಸಲು ನ. 6 ಕೊನೆಯ ದಿನ, ಕರಡು ಮತದಾರರ ಪಟ್ಟಿಯನ್ನು ನ. 23ರಂದು ಪ್ರಕಟಿಸಲಿದ್ದು, ಹಕ್ಕು ಮತ್ತು ಆಕ್ಷೇಪಣೆಗಳನ್ನು ನ. 23ರಿಂದ ಡಿ. 9ರ ಒಳಗೆ ಸಲ್ಲಿಸಬಹುದಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಡಿ. 30ರಂದು ಪ್ರಕಟಿಸಲಾಗುವುದು.

ಅರ್ಜಿಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿ/ ನಿಯೋಜಿತ ಅಧಿಕಾರಿಗಳವರ ಕಚೇರಿಯಿಂದ ಪಡೆಯಬಹುದಾಗಿದೆ.ಕೈಬರಹದ, ಬೆರಳಚ್ಚು ಮಾಡಿದ ಅಥವಾ ಖಾಸಗಿಯಾಗಿ ಮುದ್ರಿಸಿದ ನಮೂನೆಗಳನ್ನು ಕೂಡ ಅಂಗೀಕರಿಸಲಾಗುವುದು ಎಂದು ಮತದಾರರ ನೋಂದಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next