Advertisement

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್‌ ಪ್ರಚಾರ

03:45 AM Jan 06, 2017 | Team Udayavani |

ಬೆಂಗಳೂರು: ವೈ.ಎ. ನಾರಾಯಣ ಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 3ಕ್ಕೆ ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

Advertisement

ಕಳೆದ ವರ್ಷ ಫೆಬ್ರವರಿಯಲ್ಲಿ ನಾರಾಯಣಸ್ವಾಮಿ ಅವರು ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಂತರ ಈ ಕ್ಷೇತ್ರಕ್ಕೆ ಯಾವಾಗ ಬೇಕಾದರೂ ಚುನಾವಣೆ ನಡೆಯಬಹುದು ಎಂದು ಜೆಡಿಎಸ್‌ ಆರು ತಿಂಗಳ ಹಿಂದೆ, ಬಿಜೆಪಿ ಮೂರು ತಿಂಗಳ ಹಿಂದೆಯೇ ಅಭ್ಯರ್ಥಿಗಳನ್ನು ಘೋಷಿಸಿದ್ದವು. ಆ ಅಭ್ಯರ್ಥಿಗಳು ಈಗಾಗಲೇ ಒಂದು ಸುತ್ತು ಪ್ರಚಾರ ಕಾರ್ಯವನ್ನು ಮುಗಿಸಿದ್ದರಾದರೂ ಇದೀಗ ಅಧಿಕೃತವಾಗಿ ದಿನಾಂಕ ಘೋಷಣೆ ಯಾಗಿರುವುದರಿಂದ ಮೂರೂ
ರಾಜಕೀಯ ಪಕ್ಷಗಳು ಆ ಕಡೆ ಗಮನಹರಿಸಿವೆ.

ಬಿಜೆಪಿಯಿಂದ ಬಸವರಾಜು ಹಾಗೂ ಜೆಡಿಎಸ್‌ನಿಂದ ಎಸ್‌.ರಮೇಶ್‌ಬಾಬು ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದು,
ಈಗಾಗಲೇ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್‌ ಪಕ್ಷದಿಂದ ಇನ್ನೂ ಅಧಿಕೃತವಾಗಿ ಅಭ್ಯರ್ಥಿ
ಘೋಷಣೆಯಾಗಿಲ್ಲ. ಆದರೂ ಆ ಪಕ್ಷದ ಆಕಾಂಕ್ಷಿಗಳು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಕ್ಷೇತ್ರದಲ್ಲಿ 21 ಸಾವಿರ ಶಿಕ್ಷಕ ಮತದಾರರಿದ್ದು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ,
ದಾವಣ ಗೆರೆ ಜಿಲ್ಲೆಯ 33 ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯನ್ನೊಳಗೊಂಡಿದೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿದ್ದ ನಾರಾಯಣಸ್ವಾಮಿ ರಾಜೀನಾಮೆ ಕೊಟ್ಟಿದ್ದರು. ಹೆಬ್ಟಾಳ ವಿಧಾನಸಭೆ ಕ್ಷೇತ್ರದಲ್ಲಿ ಶಾಸಕರಾಗಿದ್ದ ಜಗದೀಶ್‌ ನಿಧನದ ನಂತರ ಆ ಕ್ಷೇತ್ರದಲ್ಲಿ ಉಪಚುನಾವಣೆಗೆ ಸ್ಪರ್ಧಿಸಿ ಗೆಲುವು
ಸಾಧಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next