Advertisement

ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ನಾಡಿದ್ದು

11:47 AM Apr 26, 2022 | Team Udayavani |

ರಾಣಿಬೆನ್ನೂರ: ತಮ್ಮ ತಂದೆ-ತಾಯಿಯರ ಸ್ಮರಣಾರ್ಥ ಏ.28 ರಂದು ಬೆಳಗ್ಗೆ 11.30ಕ್ಕೆ ನಗರದ ಯರೇಕುಪ್ಪಿ ರಸ್ತೆಯ ಕಾಕೋಳ ಹಾಗೂ ಕೆಂಚೋಟಿಯವರ ಜಮೀನಿನ ಆವರಣದಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ನಗರಸಭೆ ಮಾಜಿ ಸದಸ್ಯ ಮಂಜುನಾಥ ಗೌಡ ಶಿವಣ್ಣನವರ ಹೇಳಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಭಿಮಾನಿಗಳ ಸಂಘದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ನಾನು ಚಿಕ್ಕ ವಯಸ್ಸಿ ನಲ್ಲಿ ತಂದೆ-ತಾಯಿಯರನ್ನು ಕಳೆದುಕೊಂಡು ಎಲ್ಲ ಸಮಾಜಗಳ ಪ್ರೀತಿಯಿಂದ ಬೆಳೆದಿದ್ದೇನೆ. ಹಾಗಾಗಿ, ಸಮಾಜಕ್ಕೆ ಏನಾದರೂ ಕೊಡುಗೆ ಕೊಡುವ ಉದ್ದೇಶದಿಂದ ಸರ್ವ ಧರ್ಮ ಉಚಿತ ಸಾಮೂಹಿಕ ವಿವಾಹ ನೆರವೇರಿಸಲು ಎಲ್ಲರ ಸಹಕಾರ ಹಾಗೂ ವಿಶ್ವಾಸದಿಂದ ಇಂತಹ ಬೃಹತ್‌ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶವಿಲ್ಲ. ಪಕ್ಷಾತೀತವಾಗಿ ಎಲ್ಲರೂ ಸಹಕಾರ ನೀಡಿದ್ದು, ಸಮಾಜ ಸೇವೆಗೆ ಮೊದಲ ಆದ್ಯತೆ ನೀಡಲಾಗಿದೆ. ಇದೇ ರೀತಿ, ಪ್ರತಿ ವರ್ಷ ಸಾಮೂಹಿಕ ವಿವಾಹ ಮಾಡುವ ಉದ್ದೇಶ ಹೊಂದಿದ್ದೇವೆ ಎಂದರು.

ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸುಮಾರು 30 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಒಟ್ಟು 50 ಜೋಡಿಗಳ ಹೆಸರು ಈಗಾಗಲೇ ನೋಂದಣಿಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ವಧು-ವರರ ದಾಖಲಾತಿಗಳನ್ನು ಪರೀಶಿಲಿಸಿ ಪರವಾನಗಿ ನೀಡಲಾಗಿದೆ. ಇನ್ನೂ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಮಾರಂಭದ ಸಾನ್ನಿಧ್ಯವನ್ನು ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮಿಗಳು, ಚೌಡಯ್ಯ ದಾನಪುರ-ನರಸೀಪುರ ನಿಜಶರಣ ಅಂಬಿಗರ ಚೌಡಯ್ಯ ನವರ ಪೀಠದ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಸ್ವಾಮಿಗಳು, ಗಚ್ಚಿನಮಠ ಮದರಕ್ಕಿ ಹಿರೇಮಠದ ಶಿವಯೋಗಿ ಶಿವಾಚಾರ್ಯರು, ತುಮ್ಮಿನಕಟ್ಟಿ ಗುರು ಮಾರ್ಕಂಡೇಶ್ವರ ಪದ್ಮಶಾಲಿ ಗುರುಮಠದ ಪ್ರಭುಲಿಂಗ ಮಹಾಸ್ವಾಮಿಗಳು ವಹಿಸುವರು ಎಂದರು.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಮಾರಂಭ ಉದ್ಘಾಟಿಸುವರು. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಸಂಸದರಾದ ಜಿ.ಎಂ.ಶಿದ್ದೇಶ್ವರ, ಶಿವಕುಮಾರ ಉದಾಸಿ, ಶಾಸಕ ಅರುಣಕುಮಾರ ಪೂಜಾರ, ಮಾಜಿ ಸಚಿವ ಎಚ್‌.ಆಂಜನೇಯ, ವಿಧಾನ ಪರಿಷತ್‌ ಸದಸ್ಯ ಆರ್‌.ಶಂಕರ್‌, ವಿಧಾನಸಭೆ ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಇನ್ನಿತರರು ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಶೇಖಣ್ಣ ಹೊಸಗೌಡ್ರ, ಪ್ರಕಾಶ ಪೂಜಾರ, ತಾಪಂ ಮಾಜಿ ಅಧ್ಯಕ್ಷ ನೀಲಕಂಠಪ್ಪ ಕುಸಗೂರು, ಅಭಿಮಾನಿಗಳ ಸಂಘದ ಅಧ್ಯಕ್ಷ ಕರಿಯಪ್ಪ ಶಿಡಗನಾಳ, ಕುಬೇರಪ್ಪ ಕೊಂಡಜ್ಜಿ, ಮಹೇಶಪ್ಪ ಹೊನ್ನಜ್ಜೆàರ, ಶಂಕ್ರಪ್ಪ ಬುರಡಿಕಟ್ಟಿ, ಮಹೇಶಪ್ಪ ಕೊಪ್ಪದ, ರಾಯಣ್ಣ ಮಾಕನೂರು, ಪ್ರಭು ತೆಗ್ಗಿನ, ಶಿವಲಿಂಗಪ್ಪ ಗೌಡಶಿವಣ್ಣನವರು, ಮಲಕಪ್ಪ ಗೌಡಶಿವಣ್ಣನವರು, ವಿಕ್ರಾಂತ ವಾಲಿ, ಸಂಕಪ್ಪ ಪೂಜಾರ, ನೀಲಪ್ಪ ದೇವರಗುಡ್ಡ, ಚನ್ನಪ್ಪ ಸಪ್ಪಣ್ಣನವರು, ಬಿ.ಪಿ. ಶಿಡೇನೂರು ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next