Advertisement

ಬಿತ್ತನೆ ಬೀಜ ವಿತರಣೆ ಸಮರ್ಪಕವಾಗಿರಲಿ: ಡಾ|ಎಂ.ಎನ್‌.

12:26 PM Apr 13, 2017 | Team Udayavani |

ಮಂಗಳೂರು: ರಾಜ್ಯದ ರೈತರಿಗೆ ಬಿತ್ತನೆ ಬೀಜ ವಿತರಣೆ ಯೋಜನೆಯನ್ನು ಸಹಕಾರ ಸಂಘಗಳ ಮೂಲಕ ವಿತರಿಸಲು ಕರ್ನಾಟಕ ರಾಜ್ಯ ಸರಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಮಾಹಿತಿ ಕಾರ್ಯಾಗಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. 

Advertisement

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ಮಾತನಾಡಿ, ರಾಜ್ಯ ಸರಕಾರದ ಈ ಯೋಜನೆ ರೈತರಿಗೆ ಬಹು ಉಪಯೋಗವಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭಗೊಳ್ಳುವ ಮೊದಲೇ ಬಿತ್ತನೆ ಬೀಜ ವಿತರಣೆ ಬಗ್ಗೆ ಚಿಂತನೆ ನಡೆಸಿರುವುದು ಶ್ಲಾಘನೀಯ ಎಂದರು.

ಈಗಾಗಲೇ ಕೆಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಬಿತ್ತನೆ ಬೀಜ ವಿತರಣೆ ಕಾರ್ಯ ನಡೆಯುತ್ತಿದೆ. ಈ ಯೋಜನೆ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಾದರೆ ಸಹಕಾರ ಇಲಾಖೆ ಮತ್ತು ಕೃಷಿ ಇಲಾಖೆಗಳು ಸಮರ್ಪಕವಾಗಿ ಕಾರ್ಯ ಯೋಜನೆ ರೂಪಿಸಬೇಕು. ಅಲ್ಲದೇ ಭತ್ತದ ಬೆಳೆಗೆ ಹೆಚ್ಚು ಪ್ರೋತ್ಸಾಹ ನೀಡಬೇಕೆಂದು ರಾಜೇಂದ್ರ ಕುಮಾರ್‌ ಹೇಳಿದರು.

ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ ನಾಯಕ್‌, ಕೃಷಿ ಅಧಿಕಾರಿ ವೀಣಾ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಸಹಕಾರ ಸಂಘಗಳ ಉಪನಿಬಂಧಕರಾದ ಬಿ.ಕೆ. ಸಲೀಂ, ಪ್ರವೀಣ್‌ ನಾಯಕ್‌, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ವಿನಯ ಕುಮಾರ್‌ ಸೂರಿಂಜೆ, ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್‌ ರೈ, ಸದಾಶಿವ ಉಳ್ಳಾಲ, ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್‌ ಎಸ್‌., ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಂಜುನಾಥ ಸಿಂಗ್‌, ತೋಟಗಾರಿಕಾ ಸಹಾಯಕ ನಿರ್ದೇಶಕ ಜೋ ಪ್ರದೀಪ್‌ ಡಿ’ಸೋಜಾ ಉಪಸ್ಥಿತರಿದ್ದರು.

ದ.ಕ. ಸಹಕಾರಿ ಸಂಘಗಳ ಉಪನಿಬಂಧಕ ಬಿ.ಕೆ. ಸಲೀಂ ಪ್ರಸ್ತಾವನೆ ಗೈದರು. ಎಸ್‌ಸಿಡಿಸಿಸಿ ಬ್ಯಾಂಕ್‌, ಸಹಕಾರ ಇಲಾಖೆ, ಕೃಷಿ ಇಲಾಖೆ ಆಶ್ರಯದಲ್ಲಿ ಕಾರ್ಯಾಗಾರ ನಡೆಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next