ಹೈಪರ್ ಲಿಂಕ್ ಥ್ರಿಲ್ಲರ್ ಕಥಾಹಂದರ ಒಳಗೊಂಡ “ಡಾಲರ್ಸ್ ಪೇಟೆ ’ ಚಿತ್ರದಲ್ಲಿ “ಲೂಸಿಯ’ ಖ್ಯಾತಿಯ ನಿರ್ದೇಶಕ ಪವನ್ ಪತ್ನಿ ಸೌಮ್ಯ ಜಗನ್ ಮೂರ್ತಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಅವರ ಕ್ಯಾರೆಕ್ಟರ್ ಪೋಸ್ಟರ್ ಅನ್ನು ಚಿತ್ರತಂಡ ರಿವೀಲ್ ಮಾಡಿದೆ.
ಚಿತ್ರದಲ್ಲಿ ಸೌಮ್ಯ ಜಗನ್ ಮೂರ್ತಿ ಕ್ಯಾಶಿಯರ್ ಪಾತ್ರವನ್ನು ನಿರ್ವಹಿಸಿದ್ದು, ಬಿಡುಗಡೆಯಾಗಿರುವ ಕ್ಯಾರೆಕ್ಟರ್ ಪೋಸ್ಟರ್ ಕುತೂಹಲ ಹುಟ್ಟಿಸುವಂತಿದೆ. ಮೋಹನ್ ಎನ್ ಮುನಿನಾರಾಯಣಪ್ಪ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರ ಡಾಲರ್ಸ್ ಪೇಟೆ’. ಚಿತ್ರದಲ್ಲಿ ಸೌಮ್ಯ ಜಗನ್ ಮೂರ್ತಿ, ಆಕರ್ಷ್ ಕಮಲ, ವೆಂಕಟ್ ರಾಜು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದು, ಪೃಥ್ವಿ ಅಂಬರ್ ಗೆಸ್ಟ್ ಅಪಿಯರೆನ್ಸ್ ಚಿತ್ರದಲ್ಲಿದೆ.
ಉಳಿದಂತೆ ಕುಶಾಲ್.ಎಸ್, ದತ್ತು, ರಾಘವೇಂದ್ರ, ಹೊನ್ನವಳ್ಳಿ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಸೂರಜ್ ಜೋಯಿಸ್ ಸಂಗೀತ ನಿರ್ದೇಶನ, ಆನಂದ್ ಸುಂದರೇಶ ಛಾಯಾಗ್ರಹಣ, ಮಹೇಶ್ ತೊಗಟ್ಟ ಸಂಕಲನ ಚಿತ್ರಕ್ಕಿದೆ.