Advertisement

ಉತ್ತರ ಪ್ರದೇಶ: ಬಿಜೆಪಿ ಮತ್ತು ಎಸ್ ಪಿ ಕಾರ್ಯಕರ್ತರ ಮಾರಾಮಾರಿ

07:17 PM Mar 13, 2022 | Team Udayavani |

ಬದೌನ್: ಚುನಾವಣಾ ಫಲಿತಾಂಶ ಪ್ರಕಟವಾದ ಮೂರು ದಿನಗಳ ಬಳಿಕ ಸಮಾಜವಾದಿ ಪಕ್ಷ ಮತ್ತು ಬಿಜೆಪಿ ಬೆಂಬಲಿಗರ ನಡುವಿನ ರಾಜಕೀಯ ವಾದವು ಭಾನುವಾರ ಘರ್ಷಣೆಯಾಗಿ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟಕ್ಕೆ ಕಾರಣವಾಗಿದೆ.

Advertisement

ಆಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಕರಾಲಾ ಪ್ರದೇಶದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ 10 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಬೆಂಬಲಿಗರೊಂದಿಗೆ ರಾಜಕೀಯ ವಾದದಲ್ಲಿ ಭಾಗಿಯಾಗಿದ್ದು ಅದು ಹಿಂಸಾಚಾರಕ್ಕೆ ತಿರುಗಿ ಬೆಂಬಲಿಗರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ಹತೋಟಿಗೆ ತರಲು ನಾಲ್ಕು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಪೊಲೀಸ್ ತಂಡಗಳು ಅಲ್ಲಿಗೆ ತಲುಪುತ್ತಿದ್ದಂತೆ ಘರ್ಷಣೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ  ಪ್ರವೀಣ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಬಿಜೆಪಿಯ ಬೆಂಬಲಿಗ ಎನ್ನಲಾದ ರುಸ್ತಮ್ ಮತ್ತು ಸಮಾಜವಾದಿ ಪಕ್ಷದ ನಿಕಟವರ್ತಿ ಅಸ್ರಾರ್ ಎನ್ನುವವರೇ ಘರ್ಷಣೆಗೆ ಕಾರಣವಾಗಿದ್ದು, ಇಬ್ಬರೂ ಅಪರಾಧ ಹಿನ್ನೆಲೆಯನ್ನು ಹೊಂದಿದ್ದು, ಇನ್ನೂ ಬಂಧನಕ್ಕೊಳಗಾಗಿಲ್ಲ. ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದು, ಅವರನ್ನು ಆಲಾಪುರ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಚೌಹಾಣ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next