Advertisement

ಎಸ್‌ಪಿ, ಬಿಎಸ್‌ಪಿಯಿಂದ ಬಿಜೆಪಿಗೆ 30 ಸ್ಥಾನ ನಷ್ಟ

07:00 AM Mar 31, 2018 | |

ಲಕ್ನೋ: ಉತ್ತರ ಪ್ರದೇಶದಲ್ಲಿ ಎಸ್‌ಪಿ ಹಾಗೂ ಬಿಎಸ್‌ಪಿ ಮೈತ್ರಿಯಿಂದಾಗಿ 2019ರ ಲೋಕಸಭೆ ಚುನಾವಣೆ ವೇಳೆ ಆ ರಾಜ್ಯದಲ್ಲಿ ಬಿಜೆಪಿಗೆ 25ರಿಂದ 30 ಸೀಟುಗಳು ಕೈತಪ್ಪಲಿವೆ ಎಂದು ಎನ್‌ಡಿಎ ಅಂಗಪಕ್ಷ ಆರ್‌ಪಿಐ (ಎ) ಮುಖ್ಯಸ್ಥ ರಾಮದಾಸ್‌ ಅಠಾವಳೆ ಅಭಿಪ್ರಾಯಪಟ್ಟಿದ್ದಾರೆ. ಜತೆಗೆ  ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌, ಎಸ್‌ಪಿ ನಾಯಕ ಅಖೀಲೇಶ್‌, ಬಿಎಸ್‌ಪಿಯ ಮಾಯಾವತಿ ಅವರಿಂದ ಮೋದಿಗೆ ಸವಾಲು ಹಾಕಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ. ಇನ್ನೊಂದೆಡೆ, ಎಲ್‌ಜೆಪಿ ಮುಖ್ಯಸ್ಥ ರಾಮ್‌ ವಿಲಾಸ್‌ ಪಾಸ್ವಾನ್‌, 2019ರ ಚುನಾವಣೆಯಲ್ಲಿ ಮೋದಿ ನೇತೃತ್ವದ ಸರಕಾರ ಮತ್ತೂಂದು ಅವಧಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಬಿಜೆಪಿಯು ತನಗೆ ಅಂಟಿಕೊಂಡಿರುವ ಮುಸ್ಲಿಂ ಹಾಗೂ ಹಿಂದುಳಿದ ವರ್ಗಗಳ ವಿರೋಧಿ ಪಕ್ಷವೆಂಬ ಹಣೆಪಟ್ಟಿ ಕಳಚಿಕೊಳ್ಳಲು ಸಾಕಷ್ಟು ಪ್ರಯತ್ನಿಸುತ್ತಿದೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next