Advertisement

ವರ್ಗವಾದ ಎಸ್‌ಪಿ ದೇವರಾಜ್‌ಗೆ ಬೀಳ್ಕೊಡುಗೆ

11:28 AM Aug 04, 2018 | |

ಬೀದರ: ಜಿಲ್ಲೆಯ ಸಾರ್ವಜನಿಕರು ಹಾಗೂ ಪೊಲೀಸ್‌ ಸಿಬ್ಬಂದಿ ಸಹಕಾರದಿಂದ ಉತ್ತಮ ಕೆಲಸ ಮಾಡಲು ಸಾಧ್ಯವಾಗಿದ್ದು, ಬೀದರ ನನ್ನ ವೃತ್ತಿ ಜೀವನದಲ್ಲಿ ಬಹಳ ಸಂತೋಷ ನೀಡಿದ ಜಿಲ್ಲೆಯಾಗಿದೆ ಎಂದು ಬೀದರನಿಂದ
ವರ್ಗಾವಣೆಗೊಂಡ ಪೊಲೀಸ್‌ ವರಿಷ್ಠಾಧಿಕಾರಿ ಡಿ.ದೇವರಾಜ್‌ ಹೇಳಿದರು.

Advertisement

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ನನ್ನ ಅವಧಿಯಲ್ಲಿ ಪೊಲೀಸ್‌ ಇಲಾಖೆಗೆ ಘನತೆ ಗೌರವ ತರುವಂತಹ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಂದೇ ಕುಟುಂಬದ ಸದಸ್ಯರೆಂದು ಭಾವಿಸಿ ಎಲ್ಲರಿಗೂ ಸಹಾಯ ಮಾಡಿದ್ದೇನೆ. ಠಾಣೆಗಳಲ್ಲಿ ಶುದ್ಧ ಕುಡಿವ ನೀಡಿನ ವ್ಯವಸ್ಥೆ ಕಲ್ಪಿಸಲಾಗಿದೆ. 

ಇಲಾಖೆಯಲ್ಲಿ ಅನೇಕ ಬದಲಾವಣೆ ತರುವ ಮೂಲಕ ಜನ ಸ್ನೇಹಿ ಪೊಲೀಸ್‌ ವ್ಯವಸ್ಥೆಗೆ ಬುನಾದಿ ಹಾಕಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಸಮಯದಲ್ಲಿ ಯಾವುದಾದರೂ ಘಟನೆಗಳು ಸಂಭವಿಸಿದೆ ಕೂಡಲೆ ಸ್ಥಳಕ್ಕೆ ಭೇಟಿ ನೀಡಿ
ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿದ್ದು, ಪೊಲೀಸ್‌ ಸಿಬ್ಬಂದಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಿದ್ದೇನೆ. ಅಲ್ಲದೇ ಎಲ್ಲ ಸಂದರ್ಭದಲ್ಲಿ ಮಾಧ್ಯಮದವರು ಕೂಡ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಸೆಲ್ವಮಣಿ ಹಾಗೂ ಹೆಚ್ಚುವರಿ ಎಸ್‌ಪಿ ಶ್ರೀಹರಿ ಬಾಬು ಅವರು, ಎಸ್‌ಪಿ ಡಿ.ದೇವರಾಜ ಅವರು ಜಿಲ್ಲೆಯ ಜನರೊಂದಿಗೆ ಬೆರೆತು ಉತ್ತಮ ಕೆಲಸ ನಿರ್ವಹಿಸಿದ್ದಾರೆ. 

Advertisement

ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುತ್ತಲೇ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಿದ್ದಾರೆ. ಸೂಕ್ಷ್ಮಾ  ಘಟನೆಗಳನ್ನು ಕೂಡ ಶಾಂತಿಯಿಂದ ನಿಭಾಯಿಸುವ ಮೂಲಕ ಕಾನೂನು ರಕ್ಷಣೆ ಮಾಡಿದ್ದಾರೆ. ಅನೇಕ ಘಟನೆಗಳಲ್ಲಿ ಲಾಠಿ ಹಿಡಿದು ಕೂಡ ಕಾನೂನು ಮೀರುವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಇಲಾಖೆಯ ಗೌರವ ಹೆಚ್ಚಿದ್ದಾರೆ ಎಂದು ಹೇಳಿದರು. ಭಾಲ್ಕಿ ಡಿವೈಎಸ್‌ಪಿ ವೆಂಕನಗೌಡ ಪಾಟೀಲ, ಶಶಿಕಾಂತ ಮಳ್ಳಿ, ಬಲಭೀಮ ಕಾಂಬಳೆ, ಹುಮನಾಬಾದ ಸಿಪಿಐ ಜೆ.ಎಸ್‌. ನ್ಯಾಮಗೌಡರ, ಪೊಲೀಸ್‌ ಪೇದೆ ಶಕೀಲ್‌ ಐ.ಎಸ್‌. ಮಾತನಾಡಿದರು. ಇದೇ ವೇಳೆ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಡಿ.ದೇವರಾಜ ಅವರನ್ನು ಸನ್ಮಾನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next