Advertisement

ಕಾಂಗ್ರೆಸ್‌ ಜತೆ ಎಸ್‌ಪಿ ಮೃದು ವರ್ತನೆ, ಎಸ್‌ಪಿ-ಬಿಎಸ್‌ಪಿ ಮೈತ್ರಿ ಒಡಕು ?ಮೋದಿ

09:23 AM May 06, 2019 | Team Udayavani |

ಪ್ರತಾಪ್‌ ಗಢ, ಉತ್ತರ ಪ್ರದೇಶ : ಸಮಾಜವಾದಿ ಪಕ್ಷ ಕಾಂಗ್ರೆಸ್‌ ಜತೆಗೆ ಮೃದುವಾಗಿ ವರ್ತಿಸುತ್ತಿರುವುದನ್ನು ಕಂಡರೆ ಎಸ್‌ಪಿ – ಬಿಎಸ್‌ಪಿ ಮೈತ್ರಿಯಲ್ಲಿ ಒಡುಕುಂಟಾಗಿದೆ ಎಂದನ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಂದು ಇಲ್ಲಿ ಮಾಡಿದ ಚುನಾವಣಾ ಭಾಷಣದಲ್ಲಿ ಹೇಳಿದರು.

Advertisement

ಒಂದೆಡೆ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಕಾಂಗ್ರೆಸ್‌ ವಿರುದ್ಧ ವಾಕ್‌ ದಾಳಿ ನಡೆಸುತ್ತಿದ್ದಾರೆ, ಇನ್ನೊಂದೆಡೆ ಕಾಂಗ್ರೆಸ್‌ ನಾಯಕರೋರ್ವರು ಎಸ್‌ಪಿ ಪಕ್ಷದ ವೇದಿಕೆಯನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಮೋದಿ ಹೇಳಿದರು.

ರಾಯ್‌ಬರೇಲಿಯಲ್ಲಿ ನಿನ್ನೆ ಗುರುವಾರ ನಡೆದಿದ್ದ ಸಮಾಜವಾದಿ ಪಕ್ಷದ ಸಭೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉಪಸ್ಥಿತರಿದ್ದ ವಿದ್ಯಮಾನವನ್ನು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಪರೋಕ್ಷವಾಗಿ ಉಲ್ಲೇಖೀಸಿ ಟಾಂಗ್‌ ನೀಡಿರುವುದು ಸ್ಪಷ್ಟವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next