ಲಕ್ನೋ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ದ್ವೇಷ ಭಾಷಣ ಪ್ರಕರಣದಲ್ಲಿ ಬುಧವಾರ ರಾಂಪುರ ನ್ಯಾಯಾಲಯವು ದೋಷಮುಕ್ತಗೊಳಿಸಲಾಗಿದೆ.
2022 ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ರಾಂಪುರ ನ್ಯಾಯಾಲಯವು ದ್ವೇಷ ಭಾಷಣ ಪ್ರಕರಣದಲ್ಲಿ ನಾಯಕನನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ಆದೇಶದ ವಿರುದ್ಧ ಅವರು ಎಂಪಿ ಎಂಎಲ್ಎ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು, ನಂತರ ಅವರನ್ನು ಇಂದು ದೋಷಮುಕ್ತಗೊಳಿಸಲಾಯಿತು.
ಸುದ್ದಿಗಾರರೊಂಗೆ ಮಾತನಾಡಿದ ಖಾನ್ ಪರ ವಕೀಲ ವಿನೋದ್ ಶರ್ಮಾ , ಪ್ರಕರಣದಲ್ಲಿ ಅಜಂ ಖಾನ್ ಅವರನ್ನು ಖುಲಾಸೆಗೊಳಿಸಲಾಗಿದೆ ನಮಗೆ ನ್ಯಾಯ ಸಿಕ್ಕಿರುವುದಕ್ಕೆ ನಮಗೆ ಸಂತೋಷವಾಗಿದೆ ಎಂದು ಹೇಳಿದರು.
2019ರಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಮಾಡುವ ವೇಳೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಮತ್ತು ಆಗಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ಅವರನ್ನು ಗುರಿಯಾಗಿಸಿ ಅಜಂ ಖಾನ್ ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎಂದು ದೂರು ದಾಖಲಾಗಿತ್ತು.