Advertisement

ಎಸ್‌ಪಿ ಕಚೇರಿ ಪುತ್ತೂರಿಗೆ ಸನ್ನಿಹಿತ ; ಗೃಹ ಸಚಿವರಿಂದ ಸ್ಪಂದನೆ; ನಿವೇಶನ ಮೀಸಲು

01:53 AM Oct 20, 2020 | mahesh |

ಪುತ್ತೂರು: ಬಹು ಸಮಯದ ಬೇಡಿಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯನ್ನು ಅವರ ಕಾರ್ಯವ್ಯಾಪ್ತಿಯಾಗಿರುವ ಪುತ್ತೂರಿಗೆ ಸ್ಥಳಾಂತರಿಸುವ ಪ್ರಕ್ರಿಯೆಗೆ ವೇಗ ನೀಡಲಾಗಿದ್ದು, ಜನವರಿಯೊಳಗೆ ಅನುಷ್ಠಾನವಾಗುವ ಸಾಧ್ಯತೆ ಇದೆ.

Advertisement

ಈ ಸಂಬಂಧ ಶಾಸಕ ಸಂಜೀವ ಮಠಂದೂರು ಅವರು ಗೃಹ ಸಚಿವರನ್ನು ಭೇಟಿ ಮಾಡಿದ್ದು, ಸ್ಪಂದನೆ ದೊರೆತಿದೆ. 2010ರಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವ್ಯಾಪ್ತಿಯೊಳಗಿದ್ದ ಮಂಗಳೂರು ಮಹಾನಗರವನ್ನು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಗೆ ಸೇರಿಸಲಾಯಿತು.

ಮಂಗಳೂರು ಕಂದಾಯ ವಿಭಾಗ ವ್ಯಾಪ್ತಿ ಯಲ್ಲಿ ಕಮಿಷ ನರೆಟ್‌ ಬರುವುದರಿಂದ ಎಸ್ಪಿ ಕಚೇರಿ ಆ ವ್ಯಾಪ್ತಿಯಲ್ಲಿ ಅಧಿಕಾರ ಹೊಂದಿಲ್ಲ. ಕಮಿಷನರೆಟ್‌ ಅನ್ನು ಉದ್ಘಾಟಿ ಸಿದ್ದ ಅಂದಿನ ಗೃಹಸಚಿವ ಡಾ| ವಿ.ಎಸ್‌. ಆಚಾರ್ಯ ಅವರು ಮಂಗಳೂರಿನಲ್ಲಿರುವ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿ ಸುವ ಭರವಸೆ ನೀಡಿದ್ದರು.

ಜಾಗ ಮೀಸಲು
ಶಾಸಕ ಸಂಜೀವ ಮಠಂದೂರು ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕಚೇರಿ ಸ್ಥಳಾಂ ತರಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದಾರೆ. ಪುತ್ತೂರಿನಲ್ಲಿ ನಡೆದ ಸಭೆ ಯಲ್ಲೂ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವ, ಪೌರಾಡಳಿತ ಸಚಿವ ಹಾಗೂ ಸಂಸದರ ಸಮ್ಮುಖದಲ್ಲಿ ಸ್ಥಳಾಂತರ ಬೇಡಿಕೆ ಬಗ್ಗೆ ಪ್ರಸ್ತಾವಿಸಿದ್ದರು. ಪ್ರಸ್ತುತ ಎಸ್ಪಿ ಕಚೇರಿ ಸ್ಥಾಪನೆಗೆ ನಗರದ ಹೊರವಲಯದ ಬನ್ನೂರಿನಲ್ಲಿ ಕಂದಾಯ ಇಲಾಖೆ 2 ಎಕ್ರೆ ಭೂಮಿ ಗುರುತಿಸಿದೆ. ಪಹಣಿ ಸಂಬಂಧಿಸಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಲಾಭ ಏನು!
ಮಂಗಳೂರಿನ ಅನಂತರದ ಎರಡನೇ ದೊಡ್ಡ ಪಟ್ಟಣವಾಗಿರುವ ಪುತ್ತೂರಿನ ಗಡಿ ಭಾಗದಲ್ಲಿ ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಕಡಬ ತಾಲೂಕುಗಳು ಬೆಸೆದುಕೊಂಡಿವೆ. ಫರಂಗಿಪೇಟೆಯಿಂದ ಸಂಪಾಜೆ ತನಕ, ಮತ್ತೂಂದು ಭಾಗದಲ್ಲಿ ಚಾರ್ಮಾಡಿ ಘಾಟಿ ತನಕ ಹಾಗೂ ಕೇರಳ ಗಡಿಭಾಗದ ಈಶ್ವರಮಂಗಲ, ಜಾಲಸೂರು , ಪಾಣಾಜೆ, ವಿಟ್ಲ ಭಾಗಗಳು ಬರುತ್ತವೆ. ಪುತ್ತೂರು ಕೇಂದ್ರ ಸ್ಥಾನವಾದರೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹೆಚ್ಚು ಪ್ರಯೋಜನವಾಗಲಿದೆ.

Advertisement

ಗ್ರಾಮಾಂತರ ತಾಲೂಕುಗಳಲ್ಲಿ ಅಪರಾಧ ಪತ್ತೆ, ಕಾನೂನು ಸುವ್ಯವಸ್ಥೆಗೆ, ಎಸ್ಪಿ ಕಚೇರಿ ತನ್ನ ಕಾರ್ಯ ವ್ಯಾಪ್ತಿಯಲ್ಲೇ ಇದ್ದರೆ ಜನಸಾಮಾನ್ಯರೊಂದಿಗೂ ನಿಕಟ ವಾಗಿರಲು, ಎಸ್ಪಿ ಕಚೇರಿ ಸ್ಥಳಾಂತರದೊಂದಿಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯೂ ಲಭ್ಯವಾಗುತ್ತದೆ. ಈ ಸಿಬಂದಿ ಬೀಟ್‌ ಪೊಲೀಸ್‌ ಕಾರ್ಯ ನಿರ್ವಹಿಸ ಬಹುದು, ಭವಿಷ್ಯ ದಲ್ಲಿ ಸೈಬರ್‌ ಪೊಲೀಸ್‌ ಠಾಣೆ ಪುತ್ತೂರಿನಲ್ಲಿ ಕಾರ್ಯ ನಿರ್ವಹಿಸಬಹುದು, ಮಂಗಳೂರಿನಿಂದ ನಿರ್ವಹಿಸಬೇಕಾದ ಕಾರ್ಯದೊತ್ತಡ ಕಡಿಮೆಯಾಗುತ್ತದೆ.

ಕಚೇರಿ ಮಂಗಳೂರಲ್ಲಿ; ಕಾರ್ಯವ್ಯಾಪ್ತಿ ಪುತ್ತೂರಲ್ಲಿ !
ಪುತ್ತೂರನ್ನು ದ.ಕ. ಜಿಲ್ಲೆಯ ಗ್ರಾಮಾಂತರ ಜಿಲ್ಲೆಯಾಗಿ ಘೋಷಿಸಬೇಕು ಎಂಬ ಬೇಡಿಕೆಗೆ ಪೂರಕ ಎಂಬಂತೆ ಎಸ್ಪಿ ಕಚೇರಿ ಸ್ಥಳಾಂತರ ಮಹತ್ವ ಪಡೆದಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಹಾಗೂ ಕಡಬ ತಾಲೂಕುಗಳು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವ್ಯಾಪ್ತಿಗೆ ಬರುತ್ತವೆ. ಈ 5 ತಾಲೂಕುಗಳಿಂದ ಹೊರ ಭಾಗದಲ್ಲಿ ಇರುವ ಎಸ್ಪಿ ಕಚೇರಿಯಲ್ಲಿ ಈ ತಾಲೂಕುಗಳಿಗೆ ಕೇಂದ್ರ ಸ್ಥಾನದಲ್ಲಿರುವ ಪುತ್ತೂರಿಗೆ ಸ್ಥಳಾಂತರಿಸಬೇಕು ಎನ್ನುವ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲಾಗಿದೆ. ಇದಕ್ಕೆ ಪೂರಕವಾಗಿ ಪೊಲೀಸ್‌ ತರಬೇತಿ ಕೇಂದ್ರವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆದಿದೆ.

ಪುತ್ತೂರು ಗ್ರಾಮಾಂತರ ಜಿಲ್ಲೆಗೆ ಪೂರಕವಾಗಿ ಜಿಲ್ಲಾ ಎಸ್ಪಿ ಕಚೇರಿಯನ್ನು ಕಾರ್ಯವ್ಯಾಪ್ತಿಯಾಗಿರುವ ಪುತ್ತೂರಿಗೆ ವರ್ಗಾಯಿಸುವಂತೆ ಗೃಹ ಸಚಿವರ ಗಮನಕ್ಕೆ ತರಲಾಗಿದೆ. ಈ ವರ್ಷದೊಳಗೆ ಸ್ಥಳಾಂತರಗೊಳಿಸಲು ಗರಿಷ್ಠ ಪ್ರಯತ್ನ ನಡೆಯುತ್ತಿದೆ.
– ಸಂಜೀವ ಮಠಂದೂರು, ಶಾಸಕರು, ಪುತ್ತೂರು

Advertisement

Udayavani is now on Telegram. Click here to join our channel and stay updated with the latest news.

Next