Advertisement

ಕೇಂದ್ರ ಆರೋಗ್ಯ ಇಲಾಖೆ ರಾಜ್ಯ ಸಚಿವರಾಗಿ ಎಸ್‌.ಪಿ ಸಿಂಗ್ ಬಘೇಲ್ ನೇಮಕ

04:46 PM May 18, 2023 | Team Udayavani |

ಹೊಸದಿಲ್ಲಿ: ಕೇಂದ್ರ ಸಚಿವ ಎಸ್‌.ಪಿ ಸಿಂಗ್ ಬಘೇಲ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನಿಯೋಜಿಸಲಾಗಿದೆ. ಅವರು ಈ ಹಿಂದೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಖಾತೆಯನ್ನು ನಿರ್ವಹಿಸುತ್ತಿದ್ದರು.

Advertisement

ಬಘೇಲ್ ಅವರ ಖಾತೆಯ ಬದಲಾವಣೆಯು ಸರ್ಕಾರದ ಇಂದಿನ ಕ್ಯಾಬಿನೆಟ್ ಬದಲಾವಣೆಯ ಭಾಗವಾಗಿದೆ, ಇಂದು ಕಿರೆನ್ ರಿಜಿಜು ಅವರನ್ನು ಕಾನೂನು ಸಚಿವ ಸ್ಥಾನದಿಂದ ತೆಗೆದುಹಾಕಿ, ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ನೀಡಲಾಗಿದೆ.

ಸರ್ಕಾರದ ಕ್ಯಾಬಿನೆಟ್ ಸರ್ಜರಿಯಲ್ಲಿ, ರಿಜಿಜು ಸ್ಥಾನಕ್ಕೆ ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘ್ವಾಲ್ ಅವರನ್ನು ನೇಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಿಗೆ ಖಾತೆಗಳನ್ನು ಮರುಹಂಚಿಕೆ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next