Advertisement

ಭಟ್ಕಳಕ್ಕೆ ಭೇಟಿ ನೀಡಿದ ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್

09:10 PM Dec 07, 2021 | Team Udayavani |

ಭಟ್ಕಳ : ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ ಪೆನ್ನೇಕರ್ ಅವರು ಮಂಗಳವಾರ ಭಟ್ಕಳಕ್ಕೆ ಭೇಟಿ ನೀಡಿ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪ್ರಸಕ್ತ ಸನ್ನಿವೇಶದ ಕುರಿತು ಮಾಹಿತಿ ಪಡೆದರು.

Advertisement

ರಾಜ್ಯದಲ್ಲಿ ಓಮ್ರಿಕಾನ್ ವೈರಸ್ ತಡೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯ ಮಾಜಾಳಿ, ಭಟ್ಕಳದ ಶಿರಾಲಿ ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ತಪಾಸಣೆ ನಡೆಸಿ ಹೆಚ್ಚಿನ ನಿಗಾ ಇಡಲಾಗಿದೆ. ಭಟ್ಕಳ ಸೇರಿದಂತೆ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆರೋಪಿಗಳ ವಿರುದ್ದ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿಲ್ಲೆಗೆ ನೂತನ ಎಸ್ಪಿ ಆಗಿ ಅಧಿಕಾರ ವಹಿಸಿಕೊಂಡ ನಂತರ ಭಟ್ಕಳಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದ ಅವರು ಪಟ್ಟಣದ ವಿವಿಧ ರಸ್ತೆಯಲ್ಲಿ ಸಂಚರಿಸಿ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅದರಂತೆ ಗ್ರಾಮೀಣ ಠಾಣೆ, ಮುರ್ಡೇಶ್ವರ ಪೊಲೀಸ್ ಠಾಣೆಗೂ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಕೆ ಯು ಬೆಳ್ಳಿಯಪ್ಪ, ನಗರ ಠಾಣೆಯ ಇನ್ಸಪೆಕ್ಟರ್ ದಿವಾಕರ, ಗ್ರಾಮೀಣ ಸಿಪಿಐ ಮಹಾಬಲೇಶ್ವರ ನಾಯ್ಕ, ಪಿಎಸೈಗಳಾದ ಸುಮಾ ಆಚಾರ್ಯ, ಹೆಚ್ ಬಿ ಕುಡಕುಂಟಿ, ಭರತಕುಮಾರ, ರತ್ನಾ ಎಸ್.ಕೆ. ಯಲ್ಲಪ್ಪಾ ಮಾದರ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next