ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆ, ನಗರ ಪಾಲಿಕೆ ಹಾಗೂ ತಾಲೂಕು ಮಟ್ಟದಲ್ಲಿ ಚರ್ಮ ಉತ್ಪನ್ನ ಮಾರಾಟ ಮಳಿಗೆ(ಚರ್ಮ ಕುಟೀರ)ಗಳ ಸ್ಥಾಪನೆಗೆ ಸರ್ಕಾರದಿಂದ ಭೂಮಿ ನೀಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಹೇಳಿದರು.
ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ರಾಜ್ಯ ಮಟ್ಟದ ಚರ್ಮ ಕರಕುಶಲಕರ್ಮಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚರ್ಮ ಕರಕುಶಲಕರ್ಮಿಗಳು ಆರ್ಥಿಕವಾಗಿ ಸಬಲರಾಗಲು ಸರ್ಕಾರದಿಂದ ಮಳಿಗೆಗಳನ್ನು ತೆರೆದು ಕೊಟ್ಟರೆ ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಗಳಲ್ಲಿ 10 ಅಡಿ ಜಾಗ ನೀಡಲು ತೀರ್ಮಾನ ತೆಗೆದುಕೊಂಡಿದ್ದೇವೆ. ಬಿಬಿಎಂಪಿ ವ್ಯಾಪ್ತಿಯ ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ, ನಗರಗಳಲ್ಲಿ ಸೂಕ್ತ ಸ್ಥಳವನ್ನು ಚರ್ಮಕಾರರ ಕುಟೀರ ತೆರೆಯಲು ವ್ಯವಸ್ಥೆ ಮಾಡಿಕೊಡುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಸರ್ಕಾರದಿಂದ ತರಬೇತಿ ಹಾಗೂ ಮೂಲ ಬಂಡವಾಳದ ಜತೆಗೆ 5000 ಸಾವಿರ ರೂ. ಉಚಿತವಾಗಿ ನೀಡುವ ಮೂಲಕ ಸ್ವಯಂ
ಉದ್ಯೋಗಕ್ಕೆ ಉತ್ತೇಜಿಸುತ್ತಿದ್ದೇವೆ ಎಂದರು.