Advertisement
ಜೆಡಿಎಸ್ ರಾಜ್ಯ ಘಟಕ ಹಾಗೂ ಕೆಪಿಸಿಸಿ ವತಿಯಿಂದ ಎರಡೂ ಪಕ್ಷಗಳ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದು ಸಮ್ಮಿಶ್ರ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಸೀಟು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಲಿದ್ದು, ಸ್ಥಳೀಯ ಕಾರ್ಯಕರ್ತರು ಹಾಗೂ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕು.
Related Articles
Advertisement
ರಾಹುಲ್‌ಗಾಂಧಿ ಪ್ರಚಾರ ಸಭೆಗೂ ಗೈರು ಹಾಜರಾಗಿದ್ದಾರೆ. ಸಿದ್ದರಾಮಯ್ಯ-ದೇವೇಗೌಡ-ಕುಮಾರಸ್ವಾಮಿಯವರ ಜಂಟಿ ಪ್ರಚಾರಕ್ಕೆ ಬಂದಿಲ್ಲ. ಹೀಗಾಗಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲಾ ಕಾಂಗ್ರೆಸ್‌ನಿಂದಲೂ ಒತ್ತಡ ಇದ್ದು, ಜೆಡಿಎಸ್ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದಾರೆ.
ಇನ್ನು, ತುಮಕೂರು ಹಾಗೂ ಹಾಸನದಲ್ಲಿ ಕೆಲವು ನಾಯಕರು ಒಳಗೊಳಗೆ ಬಿಜೆಪಿ ಪರ ಕೆಲಸ ಮಾಡುತ್ತಿರುವುದು ಜೆಡಿಎಸ್ ನಾಯಕರ ಗಮನಕ್ಕೆ ಬಂದಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ಕಠಿಣ ಸಂದೇಶ ರವಾನಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಜೆಡಿಎಸ್ ನಾಯಕರ ವಿರುದ್ಧ ದೂರು: ಈ ಮಧ್ಯೆ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್‌ನ ಕೆಲವು ನಾಯಕರು ಬಿಜೆಪಿ ಪರ ಕೆಲಸ ಮಾಡುತ್ತಿರುವ ಆರೋಪಗಳಿವೆ. ಕೋಲಾರದಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸಗೌಡರು ಹಾಲಿ ಸಂಸದ ಕೆ.ಎಚ್.ಮುನಿಯಪ್ಪ ಜತೆಗಿನ ಹಳೇ ದ್ವೇಷ ಮುಂದುವರಿಸಿ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆಂದು
-ಅಲ್ಲಿನ ಕಾಂಗ್ರೆಸ್ ನಾಯಕರು ರಾಹುಲ್‌ಗಾಂಧಿ ಪ್ರಚಾರ ಸಭೆಯ ನಂತರ ಸಚಿವ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದಿದ್ದಾರೆ. ನಂತರ, ದೇವೇಗೌಡ ಹಾಗೂ ಕುಮಾರಸ್ವಾಮಿಯವರಿಗೂ ಈ ಕುರಿತು ಮಾಹಿತಿ ನೀಡಿದ್ದು, ಶ್ರೀನಿವಾಸಗೌಡರ ಜತೆ ಚರ್ಚಿಸಿ ಸರಿಪಡಿಸುವುದಾಗಿ ಇಬ್ಬರೂ ನಾಯಕರು ಕೆ.ಎಚ್.ಮುನಿಯಪ್ಪ ಅವರಿಗೆ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.