Advertisement

C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ

12:46 AM Jan 12, 2025 | Team Udayavani |

ಬೆಂಗಳೂರು: ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ನಡುವಣ ವಾಗ್ವಾದ ಪ್ರಕರಣವನ್ನು ಸಿಐಡಿಗೆ ವಹಿಸಿರುವ ವಿಷಯಕ್ಕೆ ಸಂಬಂಧಪಟ್ಟಂತೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೃಹ ಸಚಿವ ಡಾ|ಪರಮೇಶ್ವರ ಅವರಿಗೆ ಪತ್ರ ಬರೆದಿದ್ದು, ಸರಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement

ಯಾವ ಕಾರಣಕ್ಕೆ ಸಿಐಡಿ ತನಿಖೆಗೆ ನೀಡಲಾಗಿದೆ ಎಂಬುದರ ಬಗ್ಗೆ ನಮಗಿನ್ನೂ ಸ್ಪಷ್ಟ ಮಾಹಿತಿ ಇಲ್ಲ. ಸದನದಲ್ಲಿ ನಡೆದ ಘಟನೆಯನ್ನು ಚರ್ಚಿಸುವುದು, ಮುಕ್ತಾಯ ಮಾಡು ವುದನ್ನು ತೀರ್ಮಾನಿಸುವುದರಲ್ಲಿ ಸದನಕ್ಕೆ ಸಾರ್ವಭೌಮ ಅಧಿಕಾರ ಇರುತ್ತದೆ. ಡಿ. 19ರಂದು ನಡೆದ ಘಟನೆಗೆ ಸಂಬಂಧಿಸಿ ಪರಾಮರ್ಶಿಸಿ ಪೀಠದಿಂದ ತೀರ್ಪು ನೀಡಲಾಗಿದೆ. ಸದನದ ಆವರಣದ ಒಳಗೆ ಶಿಸ್ತು ಸಂರಕ್ಷಿಸುವುದು, ಅಲ್ಲಿನ ವ್ಯವಹಾರಗಳನ್ನು ನಿಯಂತ್ರಿಸುವ ಅಧಿಕಾರ ಸಭಾಪತಿಗೆ ಪ್ರದತ್ತವಾಗಿದೆ. ಸಭಾಪತಿಯ ತೀಪೇì ಇದರಲ್ಲಿ ಅಂತಿಮವಾಗಿದೆ ಎಂದು ಹೊರಟ್ಟಿ ತಿಳಿಸಿದ್ದಾರೆ.

ಸಂಘರ್ಷ ನಿರ್ಮಾಣ ಆಗಬಾರದು
ಶಾಸಕಾಂಗಕ್ಕೆ ಮತ್ತು ಸಭಾಪತಿಯವರಿಗೆ ಪ್ರದತ್ತವಾದ ವಿಶೇಷ ಅಧಿಕಾರಕ್ಕೆ ಚ್ಯುತಿ ಬರುವಂತೆ ಕಾರ್ಯಾಂಗವು ಪ್ರಕರಣವನ್ನು ಸಿಐಡಿಗೆ ವಹಿಸುವ ಮೂಲಕ ಸಾಂವಿಧಾನಿಕ ಘರ್ಷಣೆಗೆ ಅವಕಾಶ ಮಾಡಿಕೊಟ್ಟಂತೆ ಭಾಸವಾಗುತ್ತಿದೆ. ವಿನಾಕಾರಣ ಶಾಸಕಾಂಗ ಮತ್ತು ಕಾರ್ಯಾಂಗದ ನಡುವೆ ಸಂಘರ್ಷದ ಪ್ರಮೇಯ ನಿರ್ಮಾಣ ಆಗಬಾರದು ಎಂದು ಪತ್ರದಲ್ಲಿ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಸದನದಲ್ಲಿ ನಡೆದ ಘಟನೆ ಸಭಾಪತಿಯವರ ಕಾರ್ಯವ್ಯಾಪ್ತಿಗೆ ನಿಹಿತವಾಗಿರುವುದು ತಮಗೆ ತಿಳಿದ ವಿಷಯ. ಕಾರ್ಯಾಂಗ ಮತ್ತು ಶಾಸಕಾಂಗದ ನಾವಿಬ್ಬರೂ ಪರಸ್ಪರ ಗೌರವದೊಂದಿಗೆ ನಮ್ಮ ನಮ್ಮ ಕರ್ತವ್ಯ ನಿರ್ವಹಿಸಬೇಕಿದೆ. ತಾವೂ ಕೂಡ ಸಂವಿಧಾನದ ವಿವಿಧ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಉಳ್ಳವರು. ಸಂವಿಧಾನದ ಅಡಿಯಲ್ಲೇ ಕರ್ತವ್ಯವನ್ನು ನಿರ್ವಹಿಸುತ್ತೀರಿ ಎಂಬ ವಿಶ್ವಾಸ ಇದೆ. ಸಭಾಪತಿಯವರ ಹಕ್ಕುಗಳನ್ನು ಮತ್ತು ಸದನದ ಸಾರ್ವಭೌಮತ್ವವನ್ನು ಗಮನದಲ್ಲಿಟ್ಟುಕೊಂಡು ಈ ಪ್ರಕರಣವನ್ನು ನಿರ್ವಹಿಸುತ್ತೀರಿ ಎಂದು ನಂಬುತ್ತೇನೆ ಎಂದು ಬಸವರಾಜ ಹೊರಟ್ಟಿ ಪತ್ರದಲ್ಲಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.