Advertisement

ಕಾರ್ಯಕಲಾಪದ ವೇಳೆ ಸಚಿವರ ಉಪಸ್ಥಿತಿ ಖಚಿತಪಡಿಸಿ: ಸಚಿವರಿಗೆ ಸ್ಪೀಕರ್ ಕಾಗೇರಿ ಪತ್ರ

10:05 AM Aug 31, 2021 | Team Udayavani |

ಬೆಂಗಳೂರು: ಶಾಸನ ಸಭೆಯ ಕಲಾಪಗಳು ನಡೆಯುವಾಗ ಸಚಿವರು ಸದನದಲ್ಲಿ ಹಾಜರಿರಬೇಕು ಎಂದು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರಿಗೆ ಪತ್ರ ಬರೆದಿರುವ ಸ್ಪೀಕರ್, ತಮ್ಮ ಕ್ಷೇತ್ರಕ್ಕೆ-ಸಂಬಂಧಿತ ಕಾರ್ಯಗಳ ಕಾರಣದ ಮೇಲೆ ಕೆಲವು ಸಚಿವರು ಸದನದ ಕಲಾಪದಿಂದ ಅನುಮತಿ/ವಿನಾಯಿತಿ ಕೋರಿರುವ ಕುರಿತಂತೆ ಇಬ್ಬರೂ ನಾಯಕರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿಹೊಸ ಶಿಕ್ಷಣ ನೀತಿ ಅಪೂರ್ಣ: ಹೊರಟ್ಟಿ

“ಸದಸ್ಯರು ಸಾರ್ವಜನಿಕ ಮಹತ್ವದ ವಿಚಾರಗಳ ಬಗ್ಗೆ ಕೇಳುವ ಪ್ರಶ್ನೆಗಳಿಗೆ ಸಂಬಂಧಿತ ಸಚಿವರು ಉತ್ತರ ನೀಡಬೇಕಾಗುತ್ತದೆ, ಹೀಗಾಗಿ ಸಚಿವರು ಚರ್ಚೆಯ ವೇಳೆ ಸದನದಲ್ಲಿ ಇಲ್ಲದೇ ಇರುವುದು ಸೂಕ್ತವೂ ಅಲ್ಲ ಮತ್ತು ಅಂಗೀಕಾರಾರ್ಹವೂ ಅಲ್ಲ ಎಂದು ಕಾಗೇರಿ ತಿಳಿಸಿದ್ದಾರೆ. ಸಚಿವರ ಅನುಪಸ್ಥಿತಿ, ಆಡಳಿತ ಪಕ್ಷದಿಂದ ಉತ್ತರ ಪಡೆಯುವ ಸದಸ್ಯರ ಅವಕಾಶವನ್ನು ವಂಚಿಸುತ್ತದೆ. ಈ ಹಿನ್ನೆಲೆಯಲ್ಲಿ ಸಚಿವರು ಸದನದಲ್ಲಿ ಹಾಜರಿರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ತಾವು ಮುಖ್ಯಮಂತ್ರಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಬ್ಬರಿಗೂ ಆಗ್ರಹಿಸುವುದಾಗಿ’’ ಪತ್ರದಲ್ಲಿ ಸ್ಪೀಕರ್ ತಿಳಿಸಿದ್ದಾರೆ.

ಇದೇ ಸ್ವರೂಪದ ಪತ್ರವನ್ನು ಎಲ್ಲ ಸಚಿವರಿಗೂ ವ್ಯಕ್ತಿಗತವಾಗಿ ಕಳುಹಿಸಿರುವ ಸಭಾಧ್ಯಕ್ಷರು, ಸದನದ ಕಾರ್ಯ ಕಲಾಪದಲ್ಲಿ ಪಾಲ್ಗೊಳ್ಳುವಂತೆ ಮತ್ತು ತಮ್ಮ ಕ್ಷೇತ್ರಗಳ ಅಧಿಕೃತ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಸದನ ಕಲಾಪದಿಂದ ವಿನಾಯಿತಿ ಕೋರದಂತೆ ತಿಳಿಸಿದ್ದಾರೆ.

Advertisement

ಅದೇ ರೀತಿ ಚರ್ಚೆಯ ವೇಳೆ ಅಧಿಕಾರಿಗಳು ಸಹ ಸದನದಲ್ಲಿ ಉಪಸ್ಥಿತರಿರುವಂತೆ ಸೂಚಿಸಲು ಮುಖ್ಯಕಾರ್ಯದರ್ಶಿಗಳಿಗೆ ಸ್ಪೀಕರ್ ನಿರ್ದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next