Advertisement

Speaker ಯು.ಟಿ. ಖಾದರ್ ಕೋಲದಲ್ಲಿ ಭಾಗಿ: ಮುಸ್ಲಿಂ ಮುಖಂಡರಿಂದ ಆಕ್ರೋಶ

08:19 PM Feb 05, 2024 | Team Udayavani |

ಮಂಗಳೂರು: ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಕೋಲದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿರುವ ವಿಚಾರ ಕರಾವಳಿಯಲ್ಲಿ ಚರ್ಚೆಗೆ ಗುರಿಯಾಗಿದ್ದು, ಮುಸ್ಲಿಂ ಧಾರ್ಮಿಕ ಮುಖಂಡರೊಬ್ಬರು ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಕಾರ್ಣಿಕದ ಬಂಟ್ವಾಳ ಪಣೋಲಿಬೈಲು ಕಲ್ಲುರ್ಟಿ ಕ್ಷೇತ್ರದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರು ಕೋಲ ಸೇವೆಯಲ್ಲಿ ಭಾಗಿಯಾಗಿ ದೈವ ನರ್ತಕರಿಂದ ಪ್ರಸಾದ ಸ್ವೀಕರಿಸಿದ ಬಳಿಕ ಕೆಲವರಿಂದ ಆಕ್ರೋಶ ಮತ್ತು ಟೀಕೆ ವ್ಯಕ್ತವಾಗಿದೆ.

ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಸಾಮಾಜಿಕ ತಾಣದಲ್ಲಿ ಆಕ್ರೋಶ ಹೊರ ಹಾಕಿದ್ದು, ಕೊರಗಜ್ಜನ ಭಕ್ತ ಯು. ಟಿ. ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಂದಾಳುವಾಗಿ ಕಾಣುವುದು, ಉಲಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ.‌ ಅದು ಅವರ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾದೀತು.
ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೋ ಆರಾಧಿಸಲಿ, ಪ್ರಸಾದ ಪಡೆಯಲಿ ಅದು ಅವರ ವೈಯಕ್ತಿಕ ಸ್ವಾತಂತ್ರ್ಯ. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಾಂವಿಧಾನಿಕ ಸ್ವಾತಂತ್ರ್ಯ. ಅದನ್ನು ತಡೆಯುವ ಹಕ್ಕು ನಮಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು ಮಾತ್ರ ಅವರ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವರಿಗೆ ಗೌರವ ಕೊಡುವುದು ಮುಸ್ಲಿಮ್ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಬರೆದಿದ್ದಾರೆ.

”ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಯು.ಟಿ.ಖಾದರ್ ಅವರ ಗೆಲುವಿಗಾಗಿ ಪಣೋಲಿ ಬೈಲು ಕ್ಷೇತ್ರದಲ್ಲಿ ಹರಕೆ ಹೊತ್ತ ಸೇವೆ ಕೋಲದಲ್ಲಿ ಸ್ಪೀಕರ್ ಖಾದರ್ ಅವರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ಟೀಕೆಗಳು ಕೇಳಿ ಬಂದ ಬಳಿಕ ಸ್ಪಷ್ಟನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next